ರಾಜಸ್ಥಾನ ಚುನಾವಣೆ | ಬಿಜೆಪಿಗೆ ಬಿಜೆಪಿಯೇ ಶತ್ರು; ಕಾಂಗ್ರೆಸ್‌ಗೂ ಅಂತಃಕಲಹದ ಅಂಕುಶ

Date:

Advertisements

ಚುನಾವಣೆ ಘೋಷಣೆ ಆಗಿರುವ ಪಂಚ ರಾಜ್ಯಗಳ ಪೈಕಿ ರಾಜಸ್ಥಾನ ಪ್ರಮುಖವಾದುದು. ಅಧಿಕಾರದಲ್ಲಿರುವ ಸರ್ಕಾರಗಳು ಮುಂದಿನ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಇತಿಹಾಸವನ್ನು ರಾಜಸ್ಥಾನ ಹೊಂದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆ ಪರಂಪರೆಯನ್ನು ಮುರಿಯಲು ಪ್ರಯತ್ನಿಸುತ್ತಿದೆ. ಆದರೆ, ಬಿಜೆಪಿ ಅದೇ ಕಾರಣಕ್ಕೆ ಗದ್ದುಗೆ ಹಿಡಿಯುವ ಕನಸು ಕಾಣುತ್ತಿದೆ.

ನವೆಂಬರ್‌ 25ರಂದು ನಡೆಯಲಿರುವ ಚುನಾವಣೆಯಲ್ಲಿ ರಾಜ್ಯದ 200 ಕ್ಷೇತ್ರಗಳಿಗಾಗಿ ಎರಡೂ ಪಕ್ಷಗಳು ತೀವ್ರ ಪೈಪೋಟಿ ನಡೆಸುತ್ತಿವೆ. 2018ರ ಡಿ 7ರಂದು ರಾಜಸ್ಥಾನ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆದು, ಕಾಂಗ್ರೆಸ್ 100 ಸ್ಥಾನಗಳನ್ನು ಗೆದ್ದಿತ್ತು. 2013ರ ಚುನಾವಣೆಯಲ್ಲಿ 163 ಸೀಟುಗಳ ಭರ್ಜರಿ ಬಹುಮತ ಪಡೆದಿದ್ದ ಬಿಜೆಪಿ, 2018ರಲ್ಲಿ 73 ಸ್ಥಾನಕ್ಕೆ ಕುಸಿದಿತ್ತು. ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ಕೇವಲ ಒಂದು ಮತದ ಕೊರತೆ ಎದುರಾಗಿ, ಬಿಎಸ್‌ಪಿ ಮತ್ತು ಇತರೆ ಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚಿಸಿತ್ತು.

ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೊದಲ ಶತ್ರು ಆಡಳಿತ ವಿರೋಧಿ ಅಲೆ. ಹೊಸ ರೀತಿಯ ಕಲ್ಯಾಣ ಕಾರ್ಯಕ್ರಮಗಳ ಮೂಲಕ ರಾಜ್ಯದ ಜನರನ್ನು ಮುಟ್ಟುವಲ್ಲಿ ಸಫಲರಾಗಿರುವ ಅಶೋಕ್ ಗೆಹ್ಲೋಟ್, ಆಡಳಿತ ವಿರೋಧಿ ಅಲೆಯನ್ನು ಒಂದು ಮಟ್ಟಿಗೆ ಇಲ್ಲವಾಗಿಸಿದ್ದಾರೆ ಎನ್ನುವುದೇನೋ ನಿಜ. ಆದರೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಗೊಂದಲಕ್ಕೆ ಸಿಲುಕಿದೆ. ಪಕ್ಷದಲ್ಲಿ ಅಂತಃಕಲಹ ಸ್ಫೋಟಗೊಂಡಿದೆ. ಕಾಂಗ್ರೆಸ್‌ನ ಕೆಲವು ಹಾಲಿ ಶಾಸಕರ ವಿರುದ್ಧ ಆ ಪಕ್ಷದ ಕಾರ್ಯಕರ್ತರೇ ಬೀದಿಗಿಳಿದಿದ್ದಾರೆ; ಪ್ರತಿಭಟನೆ ನಡೆಸಿ, ಮತ್ತೆ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಕಾರ್ಯಕರ್ತರ ಅಭಿಲಾಷೆಗೆ ತಕ್ಕಂತೆ ಕಾಂಗ್ರೆಸ್ ಶೇ.30ರಷ್ಟು ಹಾಲಿ ಶಾಸಕರನ್ನು ಕೈಬಿಡಲಿದೆ ಎನ್ನುವ ಮಾತುಗಳಿವೆ.

Advertisements

ಕಾಂಗ್ರೆಸ್‌ನ ಭವಿಷ್ಯವು ಈಗ ಅದು ಹೇಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ ಮತ್ತು ಕೊನೆಯ ಹಂತದಲ್ಲಿ ಹೇಗೆ ತನ್ನ ಪ್ರಚಾರವನ್ನು ನಡೆಸುತ್ತದೆ ಎಂಬುದನ್ನು ಅವಲಂಬಿಸಿದೆ. ಮುಖ್ಯಮಂತ್ರಿ ಹುದ್ದೆಗೆ ಅಶೋಕ್ ಗೆಹ್ಲೋಟ್ ಜೊತೆಗೆ ಸಚಿನ್ ಪೈಲಟ್ ಕೂಡ ಆಕಾಂಕ್ಷಿಯಾಗಿರುವುದು ಕಾಂಗ್ರೆಸ್‌ ಪಕ್ಷದಲ್ಲಿ ಬಣ ರಾಜಕಾರಣಕ್ಕೆ ಕಾರಣವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಇಬ್ಬರೂ ರಾಜಸ್ಥಾನದ ಮೇಲೆ ವಿಶೇಷ ಗಮನವಿರಿಸಿದ್ದು, ಕಾರ್ಯತಂತ್ರಗಳನ್ನು ಹೆಣೆಯುತ್ತಿದ್ದಾರೆ. ಕಾಂಗ್ರೆಸ್‌, ಮುಖ್ಯವಾಗಿ ಮುಸ್ಲಿಮರು ಮತ್ತು ದಲಿತರನ್ನು ಅವಲಂಬಿಸಿದೆ.

ಚುನಾವಣೆ ನಡೆಯಲಿರುವ ಐದು ರಾಜ್ಯಗಳ ಪೈಕಿ ರಾಜಸ್ಥಾನ ಬಿಜೆಪಿ ಪಾಲಿಗೆ ಮಹತ್ವದ್ದೆನಿಸಿದೆ. 2024ರ ಚುನಾವಣೆಯ ದೃಷ್ಟಿಯಿಂದ ರಾಜಸ್ಥಾನದ ಗದ್ದುಗೆ ಹಿಡಿಯುವುದು ಬಿಜೆಪಿಗೆ ಮುಖ್ಯವೆನಿಸಿದೆ. ಆದರೆ, ಹಾಲಿ ವಿರೋಧ ಪಕ್ಷವಾಗಿದ್ದರೂ ಬಿಜೆಪಿ ಪರಿಸ್ಥಿತಿ ಅಷ್ಟು ಆಶಾದಾಯಕವಾಗಿಲ್ಲ. ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿಗೆ ಬಿಜೆಪಿಯೇ ಶತ್ರುವಾಗಿದೆ. ಅದಕ್ಕೆ ಕಾರಣ ಆ ಪಕ್ಷದ ಹೈಕಮಾಂಡ್. ಕರ್ನಾಟಕ, ಮಧ್ಯಪ್ರದೇಶಗಳ ಮಾದರಿಯನ್ನೇ ಇಲ್ಲೂ ಅನುಸರಿಸುತ್ತಿರುವ ಬಿಜೆಪಿ, ಮಾಜಿ ಮುಖ್ಯಮಂತ್ರಿ ವಸುಂಧರಾರಾಜೇ ಅವರನ್ನು ನಿರ್ಲಕ್ಷಿಸುತ್ತಿದೆ. ಹಿರಿಯ ನಾಯಕಿಯ ಮೇಲಿನ ಅವಲಂಬನೆಯಿಂದ ಹೊರಬರಲು ಪಕ್ಷ ಮುಂದಾಗಿದೆ. ಅದರ ಭಾಗವಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವುದಿಲ್ಲ ಎಂದು ಪಕ್ಷದ ಕೇಂದ್ರ ನಾಯಕತ್ವ ಸ್ಪಷ್ಟಪಡಿಸಿದೆ. ಜೊತೆಗೆ ಆಕೆಯ ನಿಷ್ಠ ಅನುಯಾಯಿಗಳಿಗೆ ಈಗಾಗಲೇ ಟಿಕೆಟ್ ನಿರಾಕರಿಸಲಾಗಿದ್ದು, ಇನ್ನಷ್ಟು ಮಂದಿಗೆ ಕೊಡಲಿ ಪೆಟ್ಟು ಬೀಳುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಟಿಕೆಟ್ ನೀಡದಿರುವುದು ಪಕ್ಷಕ್ಕೆ ಹೊಡೆತ ನೀಡುವ ಸಾಧ್ಯತೆ ಇದೆ. ಟಿಕೆಟ್ ಸಿಗಲಿಲ್ಲವೆನ್ನುವ ಕಾರಣಕ್ಕೆ ವಸುಂಧರ ರಾಜೇ ನಿಷ್ಠರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪಕ್ಷದ ಟಿಕೆಟ್ ಗೊಂದಲ ನಿವಾರಿಸಲು ಕೇಂದ್ರ ಸಚಿವ ಕೈಲಾಶ್ ಚೌಧರಿ ಅವರ ನೇತೃತ್ವದಲ್ಲಿ ಆಂತರಿಕ ಸಮಿತಿಯೊಂದನ್ನು ನೇಮಿಸಲಾಗಿದೆ.

ರಾಜಸ್ಥಾನ

ಮಧ್ಯಪ್ರದೇಶದಂತೆ ರಾಜಸ್ಥಾನದಲ್ಲಿಯೂ ಬಿಜೆಪಿ ಹಲವು ಸಂಸದರನ್ನು ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ ಘೋಷಿಸಲಾಗಿರುವ 41 ಅಭ್ಯರ್ಥಿಗಳ ಪೈಕಿ ಏಳು ಹಾಲಿ ಸಂಸದರನ್ನು ಕಣಕ್ಕಿಳಿಸಿದೆ. ಕ್ರೀಡಾಪಟು ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ದಿವ್ಯಾ ಕುಮಾರಿ ಅವರಲ್ಲಿ ಮುಖ್ಯರಾದವರು. ಎರಡನೇ ಪಟ್ಟಿಯಲ್ಲಿ ಇನ್ನೂ ಹೆಚ್ಚಿನ ಜನ ಸಂಸದರು ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಇದೆ. ಅವರ ಪೈಕಿ ಕೆಲವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಆಮೂಲಾಗ್ರ ಬದಲಾವಣೆಯಾಗಲಿದೆ ಎಂದು ಅವರು ಪ್ರಚಾರ ಮಾಡುತ್ತಿದ್ದಾರೆ. ಅವರ ಪೈಕಿ ಕೆಲವರು ಮುಖ್ಯಮಂತ್ರಿಗಳಾಗುವ ಆಸೆ ಹೊಂದಿದ್ದು, ಕಸರತ್ತು ಕೂಡ ನಡೆಸುತ್ತಿದ್ದಾರೆ. ಎಲ್ಲ ರಾಜ್ಯಗಳಲ್ಲಿಯೂ ಆಗುತ್ತಿರುವಂತೆ ಇಲ್ಲಿಯೂ ಬಿಜೆಪಿ ಪ್ರಧಾನಿ ಮೋದಿಯವರನ್ನೇ ಅವಲಂಬಿಸಿದೆ. ಪ್ರಧಾನಿ  ಮೋದಿಯವರ ಜನಪ್ರಿಯತೆಯ ಬೆಳಕಿನಲ್ಲಿ ಎಲ್ಲ ಗೊಂದಲಗಳೂ ನಿವಾರಣೆಯಾಗಲಿವೆ ಮತ್ತು ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಭಾವಿಸಿದೆ.

ಈ ಸುದ್ದಿ ಓದಿದ್ದೀರಾ: ಮಧ್ಯಪ್ರದೇಶ ಚುನಾವಣೆ | ‘ಮಾಮಾ’ ಕೈಬಿಟ್ಟ ಬಿಜೆಪಿ; ಕಾಂಗ್ರೆಸ್‌ಗೆ ಒಬಿಸಿ, ಮಹಿಳೆಯರೇ ಶಕ್ತಿ  

ಬಿಜೆಪಿ ಮತ ಗಳಿಕೆಗಾಗಿ ಗೋವು ಮತ್ತು ಹಿಂದುತ್ವದ ಅಜೆಂಡಾದ ಹಿಂದೆ ಬಿದ್ದಿದೆ. ಆದರೆ, ಈಗಾಗಲೇ ಅಲ್ಲಿನ ಜನ ಗೋಹತ್ಯಾ ನಿಷೇಧ ಕಾನೂನಿನ ಪರಿಣಾಮವನ್ನು ತೀವ್ರವಾಗಿ ಅನುಭವಿಸುತ್ತಿದ್ದಾರೆ. ಅಳ್ವಾರ್ ಜಿಲ್ಲೆಯಲ್ಲಿ ದನದ ಕಳ್ಳಸಾಗಾಣಿಕೆ, ಗುಂಪು ಹಲ್ಲೆಗಳು ಸಾಮಾನ್ಯ ಎನ್ನುವಂತಾಗಿಬಿಟ್ಟಿವೆ. ಬಿಡಾಡಿ ದನಗಳು ಬೆಳೆಗಳನ್ನು ತಿಂದು ಹಾಳು ಮಾಡುತ್ತಿರುವುದು ರೈತರಿಗೆ ದೊಡ್ಡ ತಲೆನೋವಾಗಿದೆ. ಹಿಂದು ಮತ್ತು ಮುಸ್ಲಿಂ ರೈತರಿಬ್ಬರೂ ದನಗಳ ಹಾವಳಿಯನ್ನು ಎದುರಿಸುತ್ತಿದ್ದಾರೆ. ದನಗಳನ್ನು ವಾಹನಗಳಲ್ಲಿ ತುಂಬಿಕೊಂಡು ದೂರದ ಊರುಗಳಿಗೆ ಇಲ್ಲವೇ ಅರಣ್ಯ ಪ್ರದೇಶಗಳಲ್ಲಿ ಬಿಟ್ಟು ಬರುತ್ತಿದ್ದಾರೆ. ಕೆಲವು ಕಡೆಗಳಲ್ಲಿ ರೈತರು ದನಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದಾರೆ. ತಮ್ಮ ಬೆಳೆ ಮೇಯಲು ಬಂದ ಬೀಡಾಡಿ ದನಗಳನ್ನು ಅಟ್ಟಿಸಿಕೊಂಡು ಹೋಗುವ ಮುಸ್ಲಿಂ ರೈತರನ್ನು ದನಗಳ್ಳರೆಂದು ಬಡಿದ ನಿದರ್ಶನಗಳೂ ಇವೆ. ಇಂಥ ಪರಿಸ್ಥಿತಿಯಲ್ಲಿ ಗೋವು ಬಿಜೆಪಿಗೆ ಎಷ್ಟರ ಮಟ್ಟಿಗೆ ಮತ ತಂದುಕೊಡಬಲ್ಲದು ಎನ್ನುವ ಅನುಮಾನ ಚುನಾವಣಾ ವಿಶ್ಲೇಷಕರಲ್ಲಿದೆ.

222 e1692343004458
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X