ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

Date:

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ ಯುವಕ ಅಪಘಾತದಲ್ಲಿ ಮೃತ್ಯು 

- Advertisement -

ಹಬ್ಬಕ್ಕೆ ಹೊಸ ಬಟ್ಟೆ ಹಾಗೂ ವಸ್ತುಗಳನ್ನು ಖರೀದಿಸಲು ಕಡೂರಿಗೆ ತೆರಳಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಜೀವ ಕಳೆದುಕೊಂಡಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕ ಕಾಂತರಾಜ್ ಹಾಗೂ ಅವರ ಸ್ನೇಹಿತ ಅಣ್ಣಪ್ಪ ಎಂಬುವವರು ದಿನಾಂಕ ಮಂಗಳವಾರ ಹಬ್ಬಕ್ಕೆ ಬಟ್ಟೆ ಖರೀದಿಸಲು ಕಡೂರಿಗೆ ತೆರಳಿದ್ದರು. ಅಲ್ಲಿಂದ ಬಟ್ಟೆ ಖರೀದಿಸಿ ವಾಪಸ್ ತಮ್ಮ ಊರಿಗೆ ಬೈಕ್‌ನಲ್ಲಿ ಬರುವಾಗ, ನಾಗವಂಗಲ ಫೈ ಓವ‌ರ್ ಬಳಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಏಕಾಏಕಿ ನಿಂತ ಬಸ್, ತಪ್ಪಿಸಿಕೊಳ್ಳಲಾಗದ ಅಪಘಾತ ಮುಂದೆ ತೆರಳುತ್ತಿದ್ದ ಬಸ್‌ನ ಚಾಲಕ ಯಾವುದೇ ಮುನ್ಸೂಚನೆ ಅಥವ ಇಂಡಿಕೇಟರ್ ಹಾಕದೆ ಏಕಾಏಕಿ ಬಸನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೈಕ್ ಚಲಾಯಿಸುತ್ತಿದ್ದ ಅಣ್ಣಪ್ಪ ಸಮಯಾವಕಾಶ ಸಿಗದೆ ಬೈಕನ್ನು ನೇರವಾಗಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆಸಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರಿಗೂ ತಲೆ, ಎದೆ ಹಾಗೂ ಬೆನ್ನಿನ ಭಾಗಕ್ಕೆ ಗಂಭೀರ ಪೆಟ್ಟುಗಳಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಸ್ಥಳೀಯರು ಇಬ್ಬರನ್ನೂ ಅಂಬುಲೆನ್ಸ್ ಮೂಲಕ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಹಾಗೂ ನಂತರ ಸುಬ್ಬಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆಂದು ಅಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ, ಬುಧವಾರ ಮಧ್ಯರಾತ್ರಿ ಅಜ್ಜಂಪುರ ಪಟ್ಟಣದ ಬಳಿ ಬರುವಷ್ಟರಲ್ಲಿ ಅಣ್ಣಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಯಾವುದೇ ಮುನ್ಸೂಚನೆ ನೀಡದೆ ನಿರ್ಲಕ್ಷ್ಯದಿಂದ ಬಸ್‌ ನಿಲ್ಲಿಸಿ ಈ ದುರ್ಘಟನೆಗೆ ಕಾರಣನಾದ ಬಸ್ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತನ ಸಂಬಂಧಿಕರು ಅಜ್ಜಂಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...