ಸಿಂದಗಿ | ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡುವಂತೆ ಡಿಜಿಒ ಶರಣು ದಬಕಿ ಕರೆ

Date:

ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಬೇಕು. ಸಮಾಜದ ಎಲ್ಲ ವರ್ಗಗಳು ಸೇರಿ ಅವರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಟ್ಟಡ ಕಾರ್ಮಿಕರ ಇಲಾಖೆಯ ಡಿಜಿಒ ಶರಣು ದಬಕಿ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಸಂಗಮ ಸಂಸ್ಥೆಯಲ್ಲಿ ಆಚರಿಸಲಾದ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ಕಾರ್ಮಿಕ ಕುಟುಂಬಗಳ ಪ್ರತಿಭೆಗೆ ಗೌರವ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಮಾತನಾಡಿ, “ಸಮಾಜದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಅವರ ಪರಿಶ್ರಮವೇ ದೇಶದ ಪ್ರಗತಿಯ ಮೂಲಾಧಾರ. ಕಾರ್ಮಿಕರ ಶ್ರಮಕ್ಕೆ ತಕ್ಕ ಗೌರವ ಹಾಗೂ ಅವಕಾಶಗಳು ದೊರೆಯುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ಸಂಸ್ಥೆಯ ಸಹನಿರ್ದೇಶಕಿ ಸಿಸ್ಟರ್ ಸಿಂತಿಯಾ ಡಿ ಮೆಲ್ಲೊ ಮಾತನಾಡಿ “ಕಾರ್ಮಿಕರ ಹಕ್ಕುಗಳು, ಕಲ್ಯಾಣ ಯೋಜನೆಗಳು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಕಾರ್ಮಿಕರು ತಮ್ಮ ಹಕ್ಕುಗಳನ್ನು ಅರಿತು, ಲಭ್ಯವಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡರೆ ಕಾರ್ಮಿಕರ ಜೀವನಮಟ್ಟ ಸುಧಾರಿಸಬಹುದು” ಎಂದು ಹೇಳಿದರು.

ಇದನ್ನು ಓದಿದ್ದೀರಾ> ಸಿಂದಗಿ | ಅಂಬೇಡ್ಕರ್ ಜೀವನ ಮತ್ತು ಸಾಧನೆ ಯುವಕರಿಗೆ ಆದರ್ಶವಾಗಬೇಕು: ಫಾದರ್ ಸಂತೋಷ್ ಕರೆ

ಈ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ಕಟ್ಟಡ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಪ್ರೋತ್ಸಾಹಿಸಲಾಯಿತು.

ಕಾರ್ಮಿಕರ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು. ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಅನೇಕ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ದಿನಾಚರಣೆಗೆ ವಿಶೇಷ ಮೆರುಗು ತಂದರು. ಕಾರ್ಯಕ್ರಮವನ್ನು ವಿಜಯ ಬಂಟನೂರ ಅವರು ನಿರೂಪಿಸಿದರು. ಮಹೇಶ ಛವ್ಹಾಣ ಸ್ವಾಗತಿಸಿದರು. ಲಕ್ಷ್ಮಣ ಪೂಜಾರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...