ವಿಜಯಪುರ | ಜಪಾನ್‌ನ ದುಬಾರಿ ಮಿಯಾಝಕಿ ಮಾವು ಬೆಳೆದ ರೈತ ಮಹಿಳೆ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೈತ ಮಹಿಳೆ ರಾಜಶ್ರೀ ಅನಂತ ಜೈನ್ ಜಪಾನ್ ಮೂಲದ ಅತ್ಯಂತ ದುಬಾರಿ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ ಈ ವಿಶಿಷ್ಟ ಮಾವಿನ ಹಣ್ಣುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರಿಗೆ ಉಡುಗೊರೆಯಾಗಿ ನೀಡಿ ಸಂತೋಷ ಹಂಚಿಕೊಂಡಿದ್ದಾರೆ.

- Advertisement -

ಮಿಯಾಝಕಿ ಮಾವು ವಿಶ್ವದಲ್ಲೇ ಅತಿ ದುಬಾರಿ ಮಾವಿನ ತಳಿಗಳಲ್ಲೊಂದು ಎಂದು ಪರಿಗಣಿಸಲಾಗುತ್ತದೆ. ಕೆಜಿಗೆ ಲಕ್ಷ ರೂ. ವರೆಗೂ ಬೆಲೆ ಪಡೆಯುವ ಈ ಹಣ್ಣು ಬೆಳೆಸಲು ಹೆಚ್ಚಿನ ಕಾಳಜಿ, ತಾಪಮಾನ ನಿಯಂತ್ರಣ ಹಾಗೂ ವಿಶೇಷ ಪೋಷಕಾಂಶಗಳ ಅಗತ್ಯವಿದೆ. ಇದನ್ನೇ ಸವಾಲಾಗಿ ಸ್ವೀಕರಿಸಿದ ರಾಜಶ್ರೀ ಜೈನ್, ಆಂಧ್ರ ಪ್ರದೇಶದ ರಾಜಮಂಡ್ರಿಯಿಂದ ಒಂದು ಸಸಿಗೆ ₹10 ಸಾವಿರದಂತೆ 25 ಗಿಡಗಳನ್ನು ಖರೀದಿಸಿ ಸುಮಾರು ₹2.5 ಲಕ್ಷ ಹೂಡಿಕೆ ಮಾಡಿ ತೋಟವನ್ನು ಆರಂಭಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ> ವಿಜಯಪುರ | ಓದುವುದರ ಜತೆಗೆ ಸಂಪಾದನೆ: ಮಹಿಳಾ ವಿವಿಯ ವಿನೂತನ ಯೋಜನೆ

ಸಮರ್ಪಕ ಸಂರಕ್ಷಣೆ, ನೀರಾವರಿ ಹಾಗೂ ತೋಟಗಾರಿಕಾ ತಂತ್ರಜ್ಞಾನ ಬಳಸಿ ಬೆಳೆದ ಗಿಡಗಳು ಈಗ ಉತ್ತಮ ಫಲ ನೀಡುತ್ತಿವೆ. ಇದರ ಮೂಲಕ ಲಕ್ಷಾಂತರ ರೂಪಾಯಿ ಆದಾಯ ಸಾಧ್ಯತೆ ಕಂಡುಬಂದಿದ್ದು, ರೈತರಿಗೆ ಹೊಸ ದಾರಿ ತೋರಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೃಷಿಯನ್ನು ಉದ್ಯಮದ ರೂಪಕ್ಕೆ ತರಬೇಕೆಂಬ ಆಶಯಕ್ಕೆ ಇಂತಹ ಪ್ರಯತ್ನಗಳು ಬಲ ನೀಡುತ್ತಿವೆ. ರಾಜಶ್ರೀ ಜೈನ್ ಅವರ ಸಾಧನೆ ಸ್ಥಳೀಯ ರೈತರಿಗೂ ಪ್ರೇರಣೆಯಾಗಿದ್ದು, ಬಸವನಾಡಿನಲ್ಲಿ ಹೊಸ ತಳಿಗಳ ತೋಟಗಾರಿಕೆಗೆ ಉತ್ತೇಜನ ನೀಡಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ: ಪ್ರೇಮ ವಿವಾಹದ ದ್ವೇಷಕ್ಕೆ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ದಾಳಿ

ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಯುವಕನ ಕುಟುಂಬದ ಮೇಲೆ ಯುವತಿಯ ಕಡೆಯವರು ಮಾರಕಾಸ್ತ್ರಗಳಿಂದ...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...