ಗುಬ್ಬಿ | ಕೂದಲು ನುಂಗಿ ಪರದಾಡಿದ್ದ ನಾಗರಹಾವಿಗೆ ಜೀವದಾನ: ಉರಗ ರಕ್ಷಕ ಸ್ವಾಮಿಯ ಸಮಯೋಚಿತ ಕಾರ್ಯ

Date:

ಕೂದಲು ನುಂಗಿ ಅಸ್ವಸ್ಥಗೊಂಡು ಪರದಾಡುತ್ತಿದ್ದ ಮರಿ ನಾಗರಹಾವನ್ನು ರಕ್ಷಿಸಿ, ಅದರ ಗಂಟಲಿನಲ್ಲಿ ಸಿಲುಕಿದ್ದ ಕೂದಲಿನ ಗೊಂಚಲನ್ನು ಹೊರತೆಗೆದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಅಪರೂಪದ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.

- Advertisement -

ಗುಬ್ಬಿ  ಪಟ್ಟಣದ ಮಾರುತಿನಗರ ಎರಡನೇ ರಸ್ತೆಯಲ್ಲಿರುವ ನಂಜುಂಡಪ್ಪ ಅವರ ಮನೆಯ ಅಂಗಳದಲ್ಲಿ ಮರಿ ನಾಗರಹಾವು ಕಾಣಿಸಿಕೊಂಡಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಯಿತು. ಮಾಹಿತಿ ತಿಳಿದ ಉರಗ ರಕ್ಷಕ ಸ್ವಾಮಿ (ವೆಂಕಟೇಶ್) ತಕ್ಷಣ ಸ್ಥಳಕ್ಕೆ ಆಗಮಿಸಿ ಸುಮಾರು ಹತ್ತು ನಿಮಿಷಗಳ ಕಾರ್ಯಾಚರಣೆಯಲ್ಲಿ ಹಾವನ್ನು ಸುರಕ್ಷಿತವಾಗಿ ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಹಿಡಿದ ಬಳಿಕ ಪರಿಶೀಲನೆ ನಡೆಸಿದಾಗ ನಾಗರಹಾವು ಕೂದಲು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿ ತೀವ್ರವಾಗಿ ಪರದಾಡುತ್ತಿರುವುದು ಕಂಡುಬಂತು. ಕೂಡಲೇ ಎಚ್ಚರಿಕೆಯಿಂದ ಗಂಟಲಿನಲ್ಲಿ ಸಿಲುಕಿದ್ದ ಕೂದಲಿನ ಗೊಂಚಲನ್ನು ಹೊರತೆಗೆದು ಹಾವಿಗೆ ಉಪಶಮನ ಕಲ್ಪಿಸಿದರು.

ಆಹಾರ ಹುಡುಕುತ್ತಾ ಬಂದ ಹಾವು ಗಾಳಿಯಲ್ಲಿ ಹಾರಾಡುತ್ತಿದ್ದ ಕೂದಲಿನ ಗೊಂಚಲನ್ನು ಆಹಾರವೆಂದು ಭಾವಿಸಿ ನುಂಗಿರುವ ಸಾಧ್ಯತೆ ಇದೆ ಎಂದು ಸ್ವಾಮಿ ತಿಳಿಸಿದ್ದಾರೆ. ಕೂದಲು ಗಂಟಲಿನಲ್ಲಿ ಸಿಲುಕಿದ್ದರಿಂದ ಹಾವು ಅಸ್ವಸ್ಥಗೊಂಡಿತ್ತು. ಚಿಕಿತ್ಸೆ ಬಳಿಕ ಹಾವನ್ನು ಹೇರೂರು ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕ ಸ್ವಾಮಿ, ಮಳೆಗಾಲದಲ್ಲಿ ಹಾವುಗಳ ಸಂಚಾರ ಹೆಚ್ಚಾಗುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಯಾವುದೇ ಜಾತಿಯ ಹಾವು ಕಂಡರೂ ಅದನ್ನು ಹೊಡೆಯಲು ಅಥವಾ ಹಿಡಿಯಲು ಪ್ರಯತ್ನಿಸದೆ ತಕ್ಷಣ ಉರಗ ರಕ್ಷಕರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಸಂಪರ್ಕ: ಉರಗ ರಕ್ಷಕ ಸ್ವಾಮಿ – 96115 22154

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related