ದಾವಣಗೆರೆ | ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಜೆಇಇ ನೀಟ್ ತರಬೇತಿಗೆ ಕರುನಾಡ ಸಮರಸೇನೆ ಆಗ್ರಹ

Date:

ಸರ್ಕಾರಿ ವಿಜ್ಞಾನ ಕಾಲೇಜುಗಳಲ್ಲಿ ಐಐಟಿ , ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತವಾಗಿ
ತರಬೇತಿ, ಬೋಧನೆ ಮಾಡಬೇಕು. ಆ ಮೂಲಕ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟು ಪಡೆಯಲು ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸಿ ದಾವಣಗೆರೆಯ ಕರುನಾಡ ಸಮರಸೇನೆಯ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ವೃತ್ತದಿಂದ ಎಸಿ ಕಛೇರಿವರೆಗೆ ಜಾಥಾ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -
1003219779

ಈ ವೇಳೆ ಮಾತನಾಡಿದ ಮುಖಂಡರು “ಸರ್ಕಾರಿ ಕಾಲೇಜುಗಳಲ್ಲಿ ಬಡ, ದಲಿತ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಹೆಚ್ಚಾಗಿ ಕಲಿಯಲು ಬರುತ್ತಾರೆ. ಖಾಸಗಿ ತರಬೇತಿ ಕೇಂದ್ರಗಳಲ್ಲಿ ಮತ್ತು ಖಾಸಗಿ ಕಾಲೇಜುಗಳಲ್ಲಿ ನೀಡಿದಂತೆ ಸರ್ಕಾರಿ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಐಐಟಿ ಮತ್ತು ನೀಟ್ ಪರೀಕ್ಷೆಗಳಿಗೆ ನೀಡುವಂತೆ ಉತ್ತಮ ತರಬೇತಿ ನೀಡುತ್ತಿಲ್ಲ. ಇದರಿಂದಾಗಿ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...
1003219780

“ಬಡವರ ಮಕ್ಕಳು ಕೂಡ ಡಾಕ್ಟರ್ ಮತ್ತು ಇಂಜಿನಿಯರ್ ಆಗಬೇಕು. ಉತ್ತಮ ಶಿಕ್ಷಣ, ತರಬೇತಿ ದೊರೆತಲ್ಲಿ ಹಿಂದುಳಿದ ವರ್ಗಗಳ ಮಕ್ಕಳು ಕೂಡ ಉತ್ತಮ ಸಾಧನೆ ಮಾಡುತ್ತಾರೆ. ಹಾಗಾಗಿ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ, ವಿಜ್ಞಾನ ಪಿಯು ಕಾಲೇಜುಗಳಲ್ಲಿ ನೀಟ್, ಸಿಇಟಿ, ಜೆಇಇ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತರ ಅಡಮಾನ ಭೂಮಿ ಕಬಳಿಕೆ ಆರೋಪ: ಕ್ರಮಕ್ಕೆ ದಸಂಸ ಒತ್ತಾಯ

ಈ ವೇಳೆ ಕರುನಾಡ ಸಮರ ಸೇನೆಯ ಸಂಸ್ಥಾಪಕ ಅಧ್ಯಕ್ಷ ಐಗೂರು ಸುರೇಶ್, ಜಿಲ್ಲಾಧ್ಯಕ್ಷ ರಮೇಶ್ ಬೇಳೂರು,
ಮಹಿಳಾ ಅಧ್ಯಕ್ಷೆ ನಾಗವೇಣಿ, ವರ್ತಕರ ಘಟಕದ ಅಧ್ಯಕ್ಷ ಕಿರಣ್ ಬಾಳೆಹೊಲದ, ಕಟ್ಟಡ ಕಾರ್ಮಿಕ ಘಟಕ ಅಧ್ಯಕ್ಷ ಶ್ರೀನಿವಾಸ್, ಯುವಘಟಕ ಅಧ್ಯಕ್ಷ ಲಿಂಗರಾಜ್, ವಿಧ್ಯಾರ್ಥಿ ಘಟಕದ ಅಧ್ಯಕ್ಷ ಶಿವಕುಮಾರ್, ವಿಧ್ಯಾರ್ಥಿನಿಯರ ಘಟಕದ ಅಧ್ಯಕ್ಷೆ ಸುಮ, ಮುಖಂಡರಾದ ವಿನಾಯಕ್. ನಿಟೇಶ್. ಕುಕ್ಕುವಾಡ ತಿಪ್ಪೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ‘ಮದ್ಯದಂಗಡಿಗೆ ಕೋಟಿ, ಸರ್ಕಾರದ ಖಜಾನೆ ಲೂಟಿ’: ಸಚಿವ ಕುಮಾರಸ್ವಾಮಿ ವ್ಯಂಗ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡ ಉಪಯೋಜನೆ (ಎಸ್‌ಸಿಪಿ-ಟಿಎಸ್‌ಪಿ), ಅಬಕಾರಿ ಇಲಾಖೆ ಸೇರಿ...

ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಎಂಬಂತಿದ್ದ ಶಾಮನೂರು ಶಿವಶಂಕರಪ್ಪ ನಿಧನ

ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಶಿವಶಂಕರಪ್ಪ ಎಂಬಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ...

BREAKING NEWS | ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ...

ದಾವಣಗೆರೆ | ದೇವರ ಹೆಸರಲ್ಲಿ ಹಣ ಸಂಗ್ರಹ; ದೇಣಿಗೆ ಕೇಳಿ ಬಂದವರಿಗೆ ಥಳಿತ

ದೇಗುವ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ಬಂದಿದ್ದ ಗುಂಪೊಂದನ್ನು ದೇವಾಲಯದಲ್ಲಿ ಕೂಡಿಹಾಕಿ...