ಧಾರವಾಡ | ಉಚಿತ ಊಟ-ವಸತಿಯೊಂದಿಗೆ ಶಿಕ್ಷಣ; ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ

Date:

ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಸುಸಜ್ಜಿತ ʼಮಿಲಿಟರಿ ಬಾಲಕಿಯರ ವಸತಿ ನಿಲಯ’ ಕ್ಕೆ ಪ್ರವೇಶಾತಿ ಆರಂಭವಾಗಿದೆ. ದೇಶ ಕಾಯುವ ಯೋಧರು ಹಾಗೂ ಮಾಜಿ ಸೈನಿಕರ ಹೆಣ್ಣುಮಕ್ಕಳಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ವರ್ಷಕ್ಕಾಗಿ ಸಂಪೂರ್ಣ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಶಿಕ್ಷಣ ನೀಡಲಾಗುತಿದ್ದು, ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರು ಹಾಗೂ ಮಾಜಿ ಸೈನಿಕರ ಹೆಣ್ಣುಮಕ್ಕಳಿಗೆ ಮಾತ್ರ ಈ ಅವಕಾಶ ಮೀಸಲಿದೆ. ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳ ಗ್ರಾಮೀಣ ಭಾಗದ ಹಾಗೂ ಅರ್ಹ ವಿದ್ಯಾರ್ಥಿನಿಯರಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಸತಿ ನಿಲಯಕ್ಕೆ ಸೇರಬಯಸುವ ವಿದ್ಯಾರ್ಥಿನಿಯರು  ಕಡ್ಡಾಯವಾಗಿ ಧಾರವಾಡ ನಗರದ ವಿದ್ಯಾಸಂಸ್ಥೆಗಳಲ್ಲಿಯೇ ಪ್ರವೇಶ ಪಡೆದಿರಬೇಕು. 5ನೇ ತರಗತಿಯಿಂದ ಪಿಯುಸಿ ದ್ವಿತೀಯ ವರ್ಷದ (PUC-2) ವಿದ್ಯಾರ್ಥಿನಿಯರಿಗೆ ಮಾತ್ರ ಇಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿನಿಯರು 2026ರ ಏಪ್ರಿಲ್ 30ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಕಡ್ಡಾಯ.

ಇದನ್ನೂ ಓದಿ: ಧಾರವಾಡ | ಆಲಿಕಲ್ಲು ಮಳೆ; ಕಲಘಟಗಿಯಲ್ಲಿ ಸೃಷ್ಠಿಯಾದ ಕಾಶ್ಮೀರದ ಹಿಮಪಾತ

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ಅಧಿಕೃತ ದೂರವಾಣಿ ಸಂಖ್ಯೆ 0836-2440176 ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...