ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಸಿಡಿಲಿಗೆ ಇಬ್ಬರು ಬಲಿ, ನೆಲಕಚ್ಚಿದ ಬಾಳೆ

Date:

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಇಬ್ಬರು ಸಿಡಿಲಿಗೆ ಬಲಿಯಾದ ಪ್ರತ್ಯೇಕ ಘಟನೆ ವರದಿಯಾಗಿದೆ.

- Advertisement -

ಬಳ್ಳಾರಿ ಜಿಲ್ಲೆಯ ಸಂಡೂರಿನ ಜೋಗಿಕಲ್ಲುವಿನಲ್ಲಿ 18 ವರ್ಷದ ಅಕ್ಷತಾ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಎಡಬಿಡದೆ ಸುರಿದ ಮಳೆಯಿಂದ ಬಳ್ಳಾರಿ ಜಲ್ಲೆಯ ದೌಲತ್‌ಪುರದಲ್ಲಿ ಬಾಳೆ ಗಿಡಗಳು ನೆಲಕಚ್ಚಿದ್ದು, ತೆಕ್ಕಲಕೋಟೆ ಮತ್ತು ಕರೂರಿನಲ್ಲಿ ಉತ್ತಮ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಯಚೂರು ಜಿಲ್ಲೆಯ ಹಟ್ಟಿ ಬಳಿಯ ಬಸವನಬಗಡಿಯಲ್ಲಿ ಸಿಡಿಲು ಬಡಿದು 40 ವರ್ಷದ ರೈತ ಮಹಿಳೆ ದುರುಗಮ್ಮ ಸಾಬಯ್ಯ ಮೃತಪಟ್ಟಿದ್ದಾರೆ. ಹೊಲದಲ್ಲಿ ರಾಶಿ ಮಾಡಿದ್ದ ಮೇವಿನ ಬಣವೆಗೆ ಪ್ಲಾಸ್ಟಿಕ್‌ ಹೊದಿಸಲೆಂದು ಹೋದಾಗ ದುರಂತ ಸಂಭವಿಸಿದೆ.

ಇದನ್ನೂ ಓದಿ ಹವಾಮಾನ ವರದಿ | ರಾಜ್ಯದಲ್ಲಿ ʼಹೀಟ್‌ ವೇವ್‌ʼ ಜೊತೆ ಭಾರಿ ಮಳೆಯ ಎಚ್ಚರಿಕೆ ಕೊಟ್ಟ IMD

ಗದಗ ಜಿಲ್ಲೆಯಲ್ಲಿಯೂ ಮಳೆಯಿಂದ ಅಪಾರ ಹಾನಿ ಸಂಭವಿಸಿದ್ದು, ರೋಣ ತಾಲೂಕಿನ ನರೇಗಲ್‌ ಗ್ರಾಮದಲ್ಲಿ ವಿದ್ಯುತ್‌ ಕಂಬಗಳು, ಮರಗಳು ನೆಲಕ್ಕುರುಳಿವೆ. ಜಕ್ಕಲಿ ಗ್ರಾಮದ ಮೃತ್ಯುಂಜಯ ಎಂಬ ರೈತನ 2 ಎಕರೆ ಬಾಳೆ ನೆಲಸಮವಾಗಿದೆ.

“ಸಾಲ ಮಾಡಿ ಬಾಳೆ ನೆಟ್ಟಿದ್ದೆವು. 4 ಲಕ್ಷ ರೂ. ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಪರಿಹಾರ ಒದಗಿಸಬೇಕು” ಎಂದು ಸಂತ್ರಸ್ತ ರೈತ ಮನವಿ ಮಾಡಿದ್ದಾರೆ.

ಮಳೆ ಗದಗ

ಬುಧವಾರ ಸಂಜೆ ಕರಾವಳಿಯಲ್ಲೂ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಅತ್ತಾವರದ ಅಯ್ಯಪ್ಪಸ್ವಾಮಿ ದೇವಸ್ಥಾನದ ಗೋಡೆ ಕುಸಿದುಬಿದ್ದಿದೆ. ದೇವಸ್ಥಾನದ ಬಳಿ ನಿಂತಿದ್ದ ಕಾರುಗಳು ಜಖಂಗೊಂಡಿವೆ. ಉಳ್ಳಾಲ ತಾಲೂಕಿನಲ್ಲಿ ಎರಡು ಮನೆಗಳು ಹಾನಿಗೊಳಗಾಗಿರುವುದಾಗಿ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...