ಹವಾಮಾನ | ರಾಜ್ಯಕ್ಕೆ ಮುಂಗಾರು ಎಂಟ್ರಿ: ಜನಜೀವನ ಅಸ್ತವ್ಯಸ್ತ

Date:

ರಾಜ್ಯದಲ್ಲಿ ನೈರುತ್ಯ ಮಾರುತಗಳ ಪ್ರವೇಶವಾಗಿದ್ದು, ಈ ಬಾರಿ ತಡವಾಗಿ ಪ್ರವೇಶವಾದ ಮುಂಗಾರು ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಇತರೆಡೆ ಅಬ್ಬರಿಸಿ ಸುರಿದಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ.

ಮುಂದಿನ 6 ದಿನಗಳ ಕಾಲ ಬೆಂಗಳೂರು ಒಳಗೊಂಡಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸೂಚನೆಗಳಿವೆ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸುರಿದ ಮುಂಗಾರು ಅವಾಂತರಕ್ಕೆ ಎಡೆ ಮಾಡಿದೆ, ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಂಗಳವಾರ ಸಂಜೆ ಭಾರಿ ಪ್ರಮಾಣದ ಮಳೆಯಾಗಿದ್ದು, ಸುಮಾರು 19 ಮನೆಗಳು ನೆಲಸಮವಾಗಿವೆ. ರಸ್ತೆಯ ಮೇಲೆ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಭಟ್ಕಳ, ಗೋಕರ್ಣ ಸುತಮುತ್ತಲಿನ ಪ್ರದೇಶಗಳು ಜಲಾವೃತವಾಗಿದೆ ಆಸ್ಪತ್ರೆಯ ಒಳಗೆ ನೀರು ನುಗ್ಗಿದೆ. ಕಡವಾಡ ಸೇತುವೆ ಕುಸಿದಿದ್ದು ಸ್ಥಳದಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಈ ಸೇತುವೆ ಕುಸಿದಿರುವ ಪರಿಣಾಮ ಮೀನುಗಾರಿಕಾ ಚಟುವಟಿಕೆಗೆ ತೊಂದರೆಯಾಗಲಿದೆ ಎಂದು ಸ್ಥಳೀಯ ಮೀನುಗಾರರು ಅಭಿಪ್ರಾಯಿಸಿದ್ದಾರೆ.

ಈ ಬಾರಿ ವಿಳಂಬವಾಗಿಯೇ ಕಾಲಿರಿಸಿದ ಮುಂಗಾರು ಅಲ್ಲಲ್ಲಿ ಅವಾಂತರಗಳಿಗೆ ಮುನ್ನುಡಿ ಬರೆಯುತ್ತಿದ್ದು, ಹವಾಮಾನ ಇಲಾಖೆ ಮುಂದಿನ 6 ದಿನಗಳವರೆಗೂ ಕರಾವಳಿ ಸೇರಿದಂತೆ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ , ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...