ಹವಾಮಾನ | ಜೂನ್‌ 4ರಿಂದ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆ ಸಾಧ್ಯತೆ

Date:

ರಾಜ್ಯದಲ್ಲಿ ಜೂನ್‌ 4ರಿಂದ ಮುಂಗಾರು ಶುರುವಾಗುವ ಸುಳಿವನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಪೂರ್ವ ಮುಂಗಾರು ಒಂದಷ್ಟು ಅವಘಡಗಳಿಗೆ ಕಾರಣವಾಗಿದೆ. ಮುಂದಿನ 7 ದಿನಗಳಲ್ಲಿ ಆಲಿಕಲ್ಲು ಸಮೇತ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್‌ 1 ರಂದು ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ , ಕೊಡಗು ದಾವಣಗರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಂಭವವಿದೆ, ಬೆಂಗಳೂರು ನಗರ, ಬೇಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಗುವ ನಿರೀಕ್ಷೆಯಿದ್ದು, ಕೆಲವೆಡೆ ಗುಡುಗು ಸಿಡಿಲಿನ ಆರ್ಭಟ ಜೋರಿರಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್‌ ಮೊದಲ ವಾರ ಮಳೆಯ ಅಬ್ಬರ ಜೋರಿರಲಿದ್ದು, ಜೂನ್‌ 3ರಿಂದ 4 ದಿನಗಳವರೆಗೂ ವ್ಯಾಪಕ ಮಳೆಯಾಗುವ ಸೂಚನೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಬೀದರ್‌, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಇಲಾಖೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...