ಹವಾಮಾನ | ಕರಾವಳಿ ಮತ್ತು ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ

Date:

ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಒಟ್ಟು 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಪ್ರಮಾಣದ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸೂಚನೆ ದೊರೆತಿದೆ.

- Advertisement -

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಮುನ್ಸೂಚನೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇಂದು ಕರ್ನಾಟಕದ ಉತ್ತರ ಒಳನಾಡಿನ ಧಾರವಾಡ, ಕೊಪ್ಪಳ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದೆಡೆ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಮುಂಬರುವ ಒಂದು ವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ದೊರೆತಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ ೨೪ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಈ ಜಿಲ್ಲೆಗೂ ಅನ್ವಯವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತ ಮುಂಗಾರು ವಿಳಂಬದಿಂದ ಕಂಗಾಲಾದ ಉತ್ತರ ಕರ್ನಾಟಕದ ರೈತರು ಮಳೆಗಾಗಿ ಪ್ರಾರ್ಥಿಸಿ ಕತ್ತೆ ಮದುವೆ, ಗೊಂಬೆ ಮದುವೆ ಮುಂತಾದ ವಿವಿಧ ರೂಢಿಗಳ ಮೊರೆ ಹೋಗಿದ್ದಾರೆ. ಹೂವಿನಹಡಗಲಿಯ ಇಟ್ಟಿಗಿಯಲ್ಲಿ ಕತ್ತೆ ಮದುವೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥಿಸಲಾಗಿದೆ.

ವಿಜಯಪುರ ಜಿಲ್ಲೆಯ ಮುತ್ತಗಿಯಲ್ಲಿ ಗೊಂಬೆಗಳ ಮದುವೆ ಮಾಡಲಾಗಿದೆ. ಊರ ದೇವತೆಗೆ ಉಡಿ ತುಂಬಿ ಗೊಂಬೆಗಳಿಗೆ ಅಣಕು ಮದುವೆ ಮಾಡಿ ಮಳೆ ಬರಲೆಂದು ರೈತರು ಪ್ರಾರ್ಥಿಸಿದ್ದಾರೆ.

ಮುಂಗಾರು ಹಂಗಾಮ ಶುರುವಾಗಿ 15 ದಿನಗಳು ಕಳೆದರೂ ಬಾರದ ಮಳೆಯಿಂದ ರಾಜ್ಯದ ರೈತರು ಆತಂಕಕ್ಕೀಡಾಗಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹಿಸಿ ಕಾದು ಸುಸ್ತಾದವರು ಒಂದಷ್ಟು ಮಂದಿಯಾದರೆ, ಬಿತ್ತಿದ ಬೀಜ ಮೊಳಕೆ ಬರದೇ ಸೋತು ಎಕರೆಗಟ್ಟಲೆ ಜಮೀನಿನಲ್ಲಿ ಬಿತ್ತನೆಯಾದ ಅರೆಬರೆ ಮೊಳೆತ ಬೆಳೆಯನ್ನು ಕೆಲವು ರೈತರು ನಾಶಪಡಿಸಬೇಕಾದ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...