ಹವಾಮಾನ | ಜೂನ್‌ 15ರವರೆಗೂ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ ಅಲರ್ಟ್‌

Date:

ರಾಜ್ಯದಲ್ಲಿ ಮುಂಗಾರು ಚುರುಕಾಗಲಿದ್ದು, ಜೂನ್‌ 15ರವರೆಗೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿಯೂ ಮಳೆಯಾಗುವ ಸಾಧ್ಯತೆಗಳನ್ನು ಹವಾಮಾನ ಇಲಾಖೆ ಅಂದಾಜಿಸಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಘುವ ಸಾಧ್ಯತೆಗಳಿದೆ ಎಂದು ಹವಾಮಾನ ವರದಿ ತಿಳಿಸಿದೆ. ಅಧಿಕ ಪ್ರಮಾಣದ ಮಳೆಯಾಗುವ ಸೂಚನೆ ಇರುವುದರಿಂದ ಹಳ್ಳ ಕೊಳ್ಳ ನದಿಗಳು ತುಂಬಿ ಹರಿಯುವ ಪ್ರಮೇಯ ಸೃಷ್ಟಿಯಾಗಬಹುದು ಆದ್ದರಿಂದ ಸಾರ್ವಜನಿಕರು ಮುತುವರ್ಜಿ ವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಮೀನುಗಾರರು ಶಿಕಾರಿಗೆ ನದಿ, ಹಳ್ಳಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು-ಮಿಂಚು ಸಹಿತ ಮಳೆ ಸುರಿಯಲಿದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಆದ್ದರಿಂದ ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.


eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಕುರಿತು...

ಸಶಸ್ತ್ರ ಪಡೆಗಳಿಗೆ 2.12 ಲಕ್ಷ ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರ ಖರೀದಿ: ರಕ್ಷಣಾ ಮಂಡಳಿ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿಯು (DAC)...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ನಾಳೆ ಮತ ಎಣಿಕೆ, ಸಕಲ ಸಿದ್ಧತೆ ಪೂರ್ಣ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ನಾಳೆ...