ಹಾವೇರಿ ತಾಲ್ಲೂಕಿನ ದೇವಗಿರಿ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲವೆಂದು ಬೇಸತ್ತು ಹಾಗೂ ಹೆಚ್ಚುವರಿ ಬಸ್ ಬಿಡಲು ಆಗ್ರಹಿಸಿ ತಡವಾಗಿ ಬಂದ ಬಸ್ ಗಳನ್ನು ತಡೆದು ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರಿಗೆ ವಿದ್ಯಾರ್ಥಿಗಳು ದಿಡೀರ್ ಪ್ರತಿಭಟನೆ ಧರಣಿ ನಡೆಸಿದರು.
ದೇವಗಿರಿಯಲ್ಲಿ ವಿದ್ಯಾರ್ಥಿಗಳು ಮೂರು ನಾಲ್ಕು ತಾಸು ಪ್ರತಿಭಟನೆ ನಡೆಸಿದರು, ಯಾವ ಜವಾಬ್ದಾರಿಯುತ ಇಲಾಖೆಯ ಅಧಿಕಾರಿಗಳು ಬಂದಿಲ್ಲ. ಪ್ರತಿಭಟನೆ ಸ್ಥಳಕ್ಕೆ ಬಾರದ ಅಧಿಕಾರಿಗಳ ನಡೆಯನ್ನು ಖಂಡಿಸಿ, ಎಸ್ಎಫ್ಐ ಸಂಘಟನೆ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ವಿದ್ಯಾರ್ಥಿಗಳು ಗ್ರಾಮಸ್ಥರು ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ, ದೇವಗಿರಿಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
“ದಿನನಿತ್ಯವು ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆ ಒದಗಿಸುವಲ್ಲಿ ನಿರ್ಲಕ್ಷ್ಯತನ ತೋರಿತ್ತಿರುವುದು ಹಾಗೂ ಶಕ್ತಿ ಯೋಜನೆ ನೆಪದಿಂದಾಗಿ ತಮ್ಮ ಕರ್ತವ್ಯ ಜವಾಬ್ದಾರಿ ಮರೆಮಾಚುತ್ತಿರುವುದನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ.
ಈ ಹಿಂದ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅರ್ಧ ಗಂಟೆಗೊಮ್ಮೆ ಬಸ್ ಗಳನ್ನು ಬಿಡುತ್ತಿದ್ದರು. ಆದರೆ ಕಳೆದ ಎರಡು ಮೂರು ತಿಂಗಳಿಂದ ಅವರ ಆದೇಶವನ್ನು ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ಉಲ್ಲಂಘನೆ ಮಾಡಿದೆ. ಈ ಘಟನೆಗೆ ಪ್ರಮುಖ ಕಾರಣ ಹಾಗಾಗಿ ದಿನ ನಿತ್ಯವು ವಿದ್ಯಾರ್ಥಿಗಳ ಸಮಯಕ್ಕೆ ಸರಿಯಾಗಿ ಸಮರ್ಪಕ ಬಿಡುದಿರುವುದೆ ಘಟನೆಗಳು ಸಂಭವಿಸುತ್ತಿವೆ” ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ ಬೆಂಬಲಿಸಿ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಸರ್ಕಾರ ಹಾಗೂ ಜಿಲ್ಲಾಡಳಿತ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆಗೆ ಸಮರ್ಪಕವಾಗಿ ಬಸ್ಸುಗಳನ್ನು ಬಿಡಬೇಕು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಸಿನ ಸೌಲಭ್ಯ ಒದಗಿಸಬೇಕು. ಪ್ರಮುಖವಾಗಿ ನಗರ ಸಾರಿಗೆ ಬಸ್ ಪ್ರಾರಂಭಿಸಬೇಕು. ಈ ವಿಚಾರದಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ವೀರನಗೌಡ ಹಳೇಮನಿ ಮಾತನಾಡಿ, “ಸರ್ಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯದಿಂದ ಹಾವೇರಿ ನಗರಕ್ಕೆ ಪ್ರತಿ ನಿತ್ಯವು ಕನಿಷ್ಠ 20 ಬಸ್ಸುಗಳನ್ನು ಬಿಡಬೇಕು. ಸಂಜೆ ಹೊತ್ತು ಬಸ್ ಪಾಸ್ ನಡೆಯುವುದಿಲ್ಲ ಎಂದು ವಿದ್ಯಾರ್ಥಿಗಳ ಬಸ್ ಪಾಸ್ ತೆಗೆದುಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಬಿಡಲು ಹಿಂದೇಟು ಹಾಕುತ್ತಾರೆ. ಬಸ್ ನಿಲುಗಡೆಯಲ್ಲಿ ನಿಲ್ಲಿಸದೆ ಮುಂದೆ ಹೋಗಿ ನಿಲ್ಲಿಸುವುದು. ಹತ್ತಿಸಿಕೊಂಡು ಹೋಗದೆ ಇರುವುದು ಇನ್ನೂ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಆದರಿಂದ ಕೆಲ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶಿಸ್ತು ಕ್ರಮ ಜರುಗಿಸಬೇಕು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಭೆ ಕರೆದು ಇಡೀ ಜಿಲ್ಲೆಯ ಬಸ್ಸಿನ ಸಮಸ್ಯೆಗಳನ್ನು ಪರಿಹಾರಿಸಬೇಕು” ಎಂದು ಆಗ್ರಹಿಸಿದರು.
ವಿದ್ಯಾರ್ಥಿನಿ ಅಕ್ಷತಾ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆಯಿಂದ ತರಗತಿಗಳಿಗೆ ಸರಿಯಾಗಿ ಹೋಗಲು ಆಗುತ್ತಿಲ್ಲ. ಈಗಾಗಲೇ ಪ್ರಸ್ತುತ ವರ್ಷದಿಂದ ಎಲ್ಲಾ ಶಾಲಾ-ಕಾಲೇಜ್ ಗಳಲ್ಲಿ ಪೇಸ್ ಐಡಿ ಹಾಜರಾತಿ ಕಡ್ಡಾಯಗೊಳಿಸಿದೆ. 10 ಗಂಟೆಗೆ ಸರಿಯಾಗಿ ತರಗತಿಯಲ್ಲಿ ಇರಬೇಕು. ಇಲ್ಲದಿದ್ದರೆ ಗೈರು ಹಾಜರಾತಿ ಬೀಳುತ್ತದೆ. ಪ್ರಾಚಾರ್ಯರರು ನಮ್ಮನ್ನು ಹೊರಗಡೆ ನಿಲ್ಲುಸುತ್ತಾರೆ ಆದರಿಂದ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಮುಂದಾಗಬೇಕು ಎಂದರು.
ಕೊನೆಯಗಳಿಗೆಯಲ್ಲಿ ಬಂದ ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕರು ಅವರಿಗೆ ನಮ್ಮ ಹಾಗೆ ನೆಲದ ಮೆಲೆ ಕೂತು ಸಮಸ್ಯೆಗಳನ್ನು ಆಲಿಸಿ ಎಂದು ಪಟ್ಟುಹಿಡಿದ ವಿದ್ಯಾರ್ಥಿಗಳು ನೆಲದ ಮೇಲೆ ಕೂತು ಬೇಡಿಕೆಗಳನ್ನು ಕೇಳಿದ ಸಾರಿಗೆ ಮ್ಯಾನೇಜರ್ ಕೂಡಲೇ ಪರಿಹರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಭಾರತಿ ಸಿದ್ದನಗೌಡ್ರು, ನಾಗರಾಜ ಮಾಳಣ್ಣನವರ, ಕನ್ನಮ್ಮ ಪೂಜಾರ, ಅರ್ಚನಾ ಪೂಜಾರ, ಗಿರಿಜಾ ಡಿ ಕೆ, ಜಯಪ್ಪಗೌಡ ಕಾಳಪ್ಪನವರ, ಕಾಂತೇಶ್ ಪೂಜಾರ, ನಾಗವೇಣಿ ಪುರದ, ರೇಣುಕಾ ಪಿ, ಸಾಹಿಲ್, ಹನುಮವ್ವ ಬಾಲೆಹೊಸುರು, ಹೇಮಾವತಿ ಅಂಚ, ಜಾವಿದ್, ಅಜಿಮ್, ಮಹಮ್ಮದ್ ಅಲಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.





