ಪಂಚರಾಜ್ಯ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ ಮಧ್ಯಾಹ್ನದ ವೇಳೆಗೆ ಹೊರಬೀಳಲಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರಸ್ ಮತ್ತು ಅಧಿಕಾರಕ್ಕೇರುವ ಭರವಸೆಯೊಂದಿಗೆ ಮುನ್ನಡೆ ಸಾಧಿಸಿದೆ. ಆದರೂ, 2018ರಲ್ಲಿ ಚುನಾವಣೆಯಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಈ ಬಾರಿ ಸರಾಸರಿ 48 ಸ್ಥಾನಗಳಿಗೆ ಕುಸಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ.
ಬಿಜೆಪಿ ಈ ಬಾರಿ ಛತ್ತಿಸ್‌ಗಢವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದೆ. ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿದೆ. ರಾಜ್ಯದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ತವರು ಪಟಾಣ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಬಾರಿಯೂ ಅವರೇ ಮುಖ್ಯಮಂತ್ರಿ ಮುಖವೆಂದು ಹೇಳಲಾಗಿದೆ. ಆದರೆ, ಕಾಂಗ್ರೆಸ್ ಅವರೇ ಈ ಬಾರಿಯ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೇಳಿಲ್ಲ.
ಅದೇ ರೀತಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಬಿಜೆಪಿಯ ಮುಖ್ಯಮಂತ್ರಿ ಮುಖವೆಂದು ಹೇಳಲಾಗಿದೆ. ಆದರೆ, ಬಿಜೆಪಿ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅವರನ್ನು ಅಧಿಕೃತವೆಂದು ಹೇಳಿಲ್ಲ. ಅವರು, ರಮಣ್ ಸಿಂಗ್ ರಾಜನಂದಗಾಂವ್‌ನಿಂದ ಸ್ಪರ್ಧಿಸಿದ್ದಾರೆ. ಇನ್ನು, ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವು ಅವರು ಕಾಂಗ್ರೆಸ್‌ನಿಂದ ಅಂಬಿಕಾಪುರದಲ್ಲಿ ಸ್ಪರ್ಧಿಸಿದ್ದಾರೆ.
ಛತ್ತೀಸ್‌ಗಢದ 90 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.
ಇಂದು (ಡಿ.3) ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತಪತ್ರಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಅಂಚೆ ಮತಪತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 53 ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.