ಮಧ್ಯಪ್ರದೇಶ | ಬಿಜೆಪಿಗೆ ಭಾರೀ ಮುನ್ನಡೆ; ಲೋಕಸಭೆಯಲ್ಲೂ ಗೆಲ್ಲುತ್ತೇವೆ ಎನ್ನುತ್ತಿದೆ ಕೇಸರಿ ಪಡೆ

Date:

Advertisements

ಮಧ್ಯಪ್ರದೇಶದಲ್ಲಿ ಮತ ಎಣಿಕೆಯ ಆರಂಭದಲ್ಲೇ ಬಿಜೆಪಿ ಸರಳ ಬಹುಮತಕ್ಕೆ ಅಗತ್ಯವಿರುವ ಸ್ಥಾನಗಳನ್ನು ದಾಟಿ ಮುನ್ನಡೆ ಸಾಧಿಸಿದೆ ಮತ್ತೊಮ್ಮೆ ಅಧಿಕಾರಕ್ಕೇರುತ್ತೇವೆಂದು ಬಿಜೆಪಿ ಭರವಸೆಯಲ್ಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ ಶರ್ಮಾ ಅವರು ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದು, ಮತ ಹಾಕಿದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಪ್ರಸ್ತುತ ಮಧ್ಯಪ್ರದೇಶದಲ್ಲಿ ಬಿಜೆಪಿ 143 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 59 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಗೊಂಡ್ವಾನಾ ಗಣತಂತ್ರ ಪಕ್ಷ (ಜಿಜಿಪಿ) ಮತ್ತು ಬಿಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

Advertisements

ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಭೋಪಾಲ್‌ನ ಗೋವಿಂದಪುರದ ಬಿಜೆಪಿ ಅಭ್ಯರ್ಥಿ ಕೃಷ್ಣ ಗೌರ್ ಪ್ರತಿಪಾದಿಸಿದ್ದಾರೆ.

2024ರ ಲೋಕಸಭೆಯಲ್ಲಿ ಎಲ್ಲ 29 ಸ್ಥಾನಗಳನ್ನು ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಕಾಂಗ್ರೆಸ್ ತನ್ನ ಸೋಲನ್ನು ಅರ್ಥಮಾಡಿಕೊಂಡಿದೆ. ಇದು ನಮಗೆ ಐತಿಹಾಸಿಕ ಜಯವಾಗಲಿದೆ. ಬಿಜೆಪಿ ಸರ್ಕಾರದಲ್ಲಿ ರಾಜ್ಯ ಮತ್ತು ದೇಶದ ಭವಿಷ್ಯ ಸುಭದ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶದ 16ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಬಾಬುಲಾಲ್ ಗೌರ್ ಅವರ ಸೊಸೆ ಕೃಷ್ಣ ಗೌರ್ ಅವರು ಗೋವಿಂದಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸ್ಥಾನವಿಲ್ಲ ಮತ್ತು ಮಧ್ಯಾಹ್ನ 12 ರ ನಂತರ ಅದರ ಸೋಲಿಗೆ ಇವಿಎಂ ಯಂತ್ರಗಳನ್ನು ದೂಷಿಸುತ್ತಾರೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ನರಸಿಂಗ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X