ಮಧ್ಯಪ್ರದೇಶ | ಕಾಂಗ್ರೆಸ್‌ನ ಅಘೋಷಿತ ಸಿಎಂ ಕಮಲ್‌ ನಾಥ್‌ ಯಾರು ಗೊತ್ತೇ?

Date:

Advertisements

ಇಂದಿರಾ, ರಾಜೀವ್, ಸೋನಿಯಾ ಮತ್ತು ರಾಹುಲ್ – ಮೂರು ತಲೆಮಾರಿನ ಗಾಂಧಿಯವರೊಂದಿಗೆ ಕೆಲಸ ಮಾಡಿರುವ ಕಮಲ್ ನಾಥ್ ಅವರು ಬ್ರಾಹ್ಮಣ ವ್ಯಾಪಾರಿ ಕುಟುಂಬದ ಹಿನ್ನೆಲೆ ಉಳ್ಳವರು. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಕಮಲ್‌ ನಾಥ್ ಅವರ ರೀತಿಯಲ್ಲೇ ರಾಜಕೀಯದಲ್ಲಿ ಬೆಳೆದಿದ್ದಾರೆ.

ಔಹಾಣ್‌ ಅವರು ವಿದಿಶಾ ಪ್ರದೇಶದ ಒಬಿಸಿ ಸಮುದಾಯಕ್ಕೆ ಸೇರಿದವರು. ಅವರು ಬೆಳೆದಿದ್ದೆಲ್ಲವೂ ಇದೇ ಪ್ರದೇಶದಲ್ಲಿ. ಆದರೆ, ಕಮಲ್‌ ನಾಥ್‌ ಅವರು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬೆಳೆದವರು. ಹೀಗಾಗಿ, ಅವರು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥರಾಗಿ ನೇಮಕಗೊಂಡಾಗಿನಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ‘ಹೊರಗಿನವರು’ ಎಂಬ ಹಣೆಪಟ್ಟಿಯನ್ನು ಎದುರಿಸುತ್ತಿದ್ದಾರೆ. ಆದರೆ, ಅವರ ರಾಜಕೀಯಕ್ಕೆ ‘ಹೊರಗಿನವರು’ ಎಂಬ ಪದ ಯಾವುದೇ ಸಂದರ್ಭದಲ್ಲೂ ತೊಡಕಾಗಿಲ್ಲ ಎಂಬುದು ವಿಶೇಷ.

1980ರಿಂದ ಬುಡಕಟ್ಟು ಪ್ರಾಬಲ್ಯ ಹೆಚ್ಚಿರುವ ಚಿಂದ್ವಾರಾ ಕ್ಷೇತ್ರವನ್ನು ಕಮಲ್‌ ನಾಥ್ ಪ್ರತಿನಿಧಿಸುತ್ತಿದ್ದಾರೆ. ಹಲವಾರು ದೊಡ್ಡ ಕೈಗಾರಿಕಾ ಸಂಸ್ಥೆಗಳನ್ನು ಹೊಂದಿರುವ ಕಮಲ್‌ ನಾಥ್ ಅವರು 134.24 ಕೋಟಿ ರೂ. (ಲೋಕಸಭೆ ಚುನಾವಣೆಗೆ ಸಲ್ಲಿಸಿದ್ದ ಅಫಿಡವಿಟ್‌ ಪ್ರಕಾರ) ಮೌಲ್ಯದ ಘೋಷಿತ ಆಸ್ತಿಯನ್ನು ಹೊಂದಿದ್ದಾರೆ.

Advertisements

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಕಮಲ್‌ ಅವರನ್ನು ತಮ್ಮ ಮೂರನೇ ಮಗ ಎಂದು ಕರೆದಿದ್ದರು. 1980ರ ಚುನಾವಣೆಯಲ್ಲಿ ಕಮಲ್‌ ನಾಥ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದ ಇಂದಿರಾ ಗಾಂಧಿ, “ಇವರು ನನ್ನ ಮೂರನೇ ಮಗ. ದಯವಿಟ್ಟು ಅವರಿಗೆ ಮತ ನೀಡಿ” ಎಂದಿದ್ದರು. ಆ ಕಾರಣದಿಂದಾಗಿ ಆ ಸಂದರ್ಭದಲ್ಲಿ, “ಇಂದಿರಾ ಕೆ ದೋ ಹಾಥ್, ಸಂಜಯ್ ಗಾಂಧಿ ಔರ್ ಕಮಲ್ ನಾಥ್” ಎಂಬ ಘೋಷಣೆಗಳು ಕೇಳಿಬಂದಿದ್ದವು.

ಸಂಜಯ್ ಗಾಂಧಿಯವರಿಗೂ ನಿಕಟವರ್ತಿಯಾಗಿದ್ದ ಕಮಲ್‌ ನಾಥ್ ಅವರು ರಾಜೀವ್ ಗಾಂಧಿಯವರ ವಿಶ್ವಾಸಾರ್ಹರಾಗಿದ್ದರು. ಮಿತ್ರಪಕ್ಷಗಳು ಮತ್ತು ವಿರೋಧವನ್ನು ನಿರ್ವಹಿಸುವ ಕೆಲಸವನ್ನು ಕಮಲ್‌ ನಾಥ್‌ ನಿರ್ವಹಿಸುತ್ತಿದ್ದರು. ಅವರು ಪ್ರಧಾನ ಮಂತ್ರಿಗಳಾದ ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಅಡಿಯಲ್ಲಿ ಕೇಂದ್ರ ಸರ್ಕಾರದಲ್ಲಿ ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರ ನೇತೃತ್ವದಲ್ಲಿಯೇ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಕಮಲ್‌ ನಾಥ್ ಮುಖ್ಯಮಂತ್ರಿಯೂ ಆಗಿದ್ದರು. ಆದರೆ, ಈಗ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ 21 ಮಿತ್ರ ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಆಪರೇಷನ್‌ ಕಮಲಕ್ಕೆ ಬಲಿಯಾದ ಕಮಲ್‌ ನಾಥ್‌ ಸರ್ಕಾರ 2020ರಲ್ಲಿ ಪತನವಾಗಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X