ಛತ್ತೀಸ್‌ಘಡ | ಮೋದಿ ಗ್ಯಾರಂಟಿ ನಂಬಿದ ಮತದಾರ: ಅಧಿಕಾರದತ್ತ ಕಮಲ

Date:

Advertisements

ಕರ್ನಾಟಕದ ಚುನಾವಣೆಯಲ್ಲಿ ಗ್ಯಾರಂಟಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಕೈ ಹಿಡಿಯಲಿಲ್ಲ. ಮೋದಿ ನೀಡಿದ ಗ್ಯಾರಂಟಿಗಳನ್ನು ನಂಬಿದ್ದು, ಅಧಿಕಾರ ಹಿಡಿಯಲು ಹೊರಟಿದೆ.

ಛತ್ತೀಸ್‌ಘಡದಲ್ಲಿ ಒಟ್ಟು 90 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 46 ಸ್ಥಾನಗಳನ್ನು ಗೆಲ್ಲಬೇಕಿತ್ತು. ಸದ್ಯದ ಟ್ರೆಂಡ್‌ನಲ್ಲಿ ಬಿಜೆಪಿ 53 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಧಿಕಾರರೂಢ ಕಾಂಗ್ರೆಸ್ ಕೇವಲ 35 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ರಮಣ್ ಸಿಂಗ್, ‘ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಹಾಗೂ ಗ್ಯಾರಂಟಿಗಳ ಮೇಲೆ ಛತ್ತೀಸ್‌ಘಡದ ಜನರು ನಂಬಿಕೆ ಇರಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಭೂಪೇಶ್ ಬಘೇಲ್ ಅವರ ಗ್ಯಾರಂಟಿಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇದು ಕಾರ್ಯಕರ್ತರ ಗೆಲವು’ ಎಂದು ಬಣ್ಣಿಸಿದ್ದಾರೆ.

Advertisements

ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಇದು ಪಕ್ಷದ ಹೈಕಮಾಂಡ್ ನಿರ್ಧಾರ. ಪಕ್ಷ ನನಗೆ ಯಾವುದೇ ಕೆಲಸ ನೀಡಿದರೂ ನಾನು ಅದನ್ನು ನಿರ್ವಹಿಸುತ್ತೇನೆ” ಎಂದು ತಿಳಿಸಿದ್ದಾರೆ.

ಛತ್ತೀಸ್‌ಘಡ ಬಿಜೆಪಿ ಅಧ್ಯಕ್ಷ ಅರುಣ್ ಸಾವೋ, “ಕಾಂಗ್ರೆಸ್‌ನ ದುರಾಡಳಿತ ಕೊನೆಗೊಳ್ಳಲಿದೆ. ಕಮಲ ಅರಳಲಿದೆ. ಛತ್ತೀಸ್‌ಗಢವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿದೆ. ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆ” ಎಂದು ತಿಳಿಸಿದ್ದಾರೆ.

ಛತ್ತೀಸ್‌ಘಢದಲ್ಲಿ ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್‌ಗೆ ಸ್ಪಷ್ಟವಾದ ಗೆಲುವು ಒಲಿಯಲಿದೆ ಎಂದು ತಿಳಿಸಿದ್ದವು. ಆದರೆ ಎಕ್ಸಿಟ್ ಪೋಲ್ ಸದ್ಯ ಉಲ್ಟಾ ಹೊಡೆದಿದ್ದು ಬಿಜೆಪಿಯು ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಛತ್ತೀಸ್‌ಘಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಅಧಿಕಾರ ಪಡೆದಿತ್ತು. ಬಿಜೆಪಿ ಕೇವಲ 15 ಕ್ಷೇತ್ರಗಳ ಜಯಗಳಿಸಿ ಹೀನಾಯ ಸೋಲು ಕಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X