ಸನಾತನ ಧರ್ಮವನ್ನು ನಿಂದಿಸಿದವರಿಗೆ ಈ ಚುನಾವಣೆಯೇ ನಿದರ್ಶನ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

Date:

Advertisements

ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಬರುತ್ತಿರುವ ಮಧ್ಯೆಯೇ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ‘ಸನಾತನ ಧರ್ಮ’ವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟಿದ್ದಾರೆ.

ಚುನಾವಣಾ ಫಲಿತಾಂಶಗಳು ಬಿಜೆಪಿಯ ಕಡೆಗೆ ವಾಲುತ್ತಿರುವ ನಡುವೆ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ, ಸನಾತನ ಧರ್ಮದ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳುವ ಮೂಲಕ ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

ತೆಲಂಗಾಣ ಹೊರತುಪಡಿಸಿ ಮೂರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ವಿಜಯ ಸಿಕ್ಕ ನಂತರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಕಾರ್ಯಕರ್ತರನ್ನು ವೆಂಕಟೇಶ್ ಪ್ರಸಾದ್ ಅಭಿನಂದಿಸಿದ್ದಾರೆ.

Advertisements

ಕಾಂಗ್ರೆಸ್‌ನ ಸೋಲಿಗೆ ಅದರ ಮೈತ್ರಿ ಪಾಲುದಾರರು ಕಾರಣ ಎಂದು ಪರೋಕ್ಷವಾಗಿ ತಿಳಿಸಿರುವ ಮಾಜಿ ಕ್ರಿಕೆಟಿಗ, ಮುಂದಾದರೂ ಪಾಠ ಕಲಿಯುವಂತೆ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ಉದಯನಿಧಿ ಸ್ಟಾಲಿನ್ ನೀಡಿದ್ದ ಸನಾತನ ಧರ್ಮ ಕುರಿತ ವಿವಾದಾತ್ಮಕ ಹೇಳಿಕೆಯೇ ಕಾಂಗ್ರೆಸ್‌ ಈ ಹೀನಾಯ ಸಾಧನೆಗೆ ಕಾರಣ ಎಂಬುದನ್ನು ಪರೋಕ್ಷವಾಗಿ ಉಲ್ಲೇಖಿಸಿ ಪೋಸ್ಟ್​ ಮಾಡಿದ್ದಾರೆ.

‘ಸನಾತನ ಧರ್ಮವನ್ನು ದುರುಪಯೋಗ ಪಡಿಸಿಕೊಂಡವರು, ನಿಂದಿಸಿದವರಿಗೆ ಸರಿಯಾದ ಪಾಠ ಆಗಿದೆ. ಯಾರೇ ಆಗಲಿ ಪರಿಣಾಮ ಎದುರಿಸಬೇಕಾಗುತ್ತದೆ. ಸನಾತನ ಧರ್ಮವನ್ನು ದುರುಪಯೋಗಪಡಿಸಿಕೊಂಡರೆ, ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ನಿದರ್ಶನ. ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿಗೆ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ, ಅಮಿತ್ ಶಾ ಅವರ ಅದ್ಭುತ ನಾಯಕತ್ವ ಮತ್ತು ಪಕ್ಷದ ತಳಮಟ್ಟದ ಕಾರ್ಯಕರ್ತರ ಅಮೋಘ ಕಾರ್ಯಕ್ಕೆ ಮತ್ತೊಂದು ಸಾಕ್ಷಿಯಾಗಿದೆ’ ಎಂದು ಪೋಸ್ಟ್​ನಲ್ಲಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬರೆದಿದ್ದಾರೆ.

ತೆಲಂಗಾಣ ಹೊರತುಪಡಿಸಿ ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲಿದೆ. ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಸೋಲನುಭವಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X