ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಬಾರಿಸಿದರೆ, ಉಳಿದ ಮೂರು ರಾಜ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಜನತೆ ನೀಡಿರುವ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ವೈಚಾರಿಕ ಸಮರ ಮುಂದುವರಿಯಲಿದೆ’ ಎಂದು ತಿಳಿಸಿದ್ದಾರೆ.
मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं – विचारधारा की लड़ाई जारी रहेगी।
तेलंगाना के लोगों को मेरा बहुत धन्यवाद – प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।
— Rahul Gandhi (@RahulGandhi) December 3, 2023
“ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಪಕ್ಷದ ವಿರುದ್ಧವಾಗಿ ಬಂದಿರುವ ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ. ಆದರೆ, ವೈಚಾರಿಕ ಸಮರ ಮುಂದುವರಿಯುತ್ತದೆ” ಎಂದು ಕಾಂಗ್ರೆಸ್ ಸಂಸದರೂ ಆಗಿರುವ ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ರಾಹುಲ್ ಗಾಂಧಿ, ತೆಲಂಗಾಣದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.
‘ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸಲಿದ್ದೇವೆ. ‘ಪ್ರಜಾಲು ತೆಲಂಗಾಣ’ ನಿರ್ಮಿಸುವ ನಮ್ಮ ಭರವಸೆಯನ್ನು ಕೂಡ ಖಂಡಿತವಾಗಿ ಈಡೇರಿಸುತ್ತೇವೆ’ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.