ಬೀದರ್‌ | ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ : ಲೋಕಸಭೆಗೆ ದಿಕ್ಸೂಚಿ

Date:

Advertisements
  • ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ.
  • ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ

ಪಂಚ ರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಸಾಧಿಸಿರುವ ಅಭೂತಪೂರ್ವ ಯಶಸ್ಸು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಯಾರ ಪರ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

“ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ರಹಿತ ಆಡಳಿತ, ಅಭಿವೃದ್ದಿ ಕೆಲಸ, ದೇಶದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತೊಮ್ಮೆ ನಮ್ಮ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಇದರ ಜೊತೆಗೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವ ಮತ್ತು ಸಂಘಟನೆಯ ಬಲದಿಂದ ಇಂತಹ ಐತಿಹಾಸಿಕೆ ಗೆಲುವು ನಮ್ಮದಾಗಿದೆ” ಎಂದು ಪ್ರಕಟಣೆ ಮೂಲಕ ಹರ್ಷ ವ್ಯಕ್ತಪಡಿದರು.

“ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡು ಜನರು ಕಾಂಗ್ರೇಸ್ ಪಕ್ಷದ ಬಿಟ್ಟಿ
ಭಾಗ್ಯಗಳಿಗೆ ನೇರವಾಗಿ ತಿರಸ್ಕರಿಸಿದ್ದಾರೆ, ಕಾಂಗ್ರೇಸ್ ಪಕ್ಷದವರು ರಾಹುಲ್ ಗಾಂಧಿಯವರನ್ನು ಪ್ರಧಾನಿ
ಅಭ್ಯರ್ಥಿಯನ್ನಾಗಿ ಮಾಡಲು ಕಟ್ಟಿಕೊಂಡಿರುವ ಭ್ರಷ್ಟಾಚಾರಿಗಳ ಇಂಡಿಯಾ ಮೈತ್ರಿಕೂಟಕ್ಕೂ ಜನರು ಸೊಪ್ಪು ಹಾಕಿಲ್ಲಾ. ಕಾಂಗ್ರೇಸ್‌ನಲ್ಲಿ ಎರಡನೆ ಹಂತದ ನಾಯಕರಿಗೆ ಬೆಳೆಯಲು ಅವಕಾಶವಿಲ್ಲ, ನಾಯಕರ ಮಗ ಮಾತ್ರ ನಾಯಕನಾಗಬೇಕು ಎನ್ನುವ ನಿಯಮವಿದೆ. ಆದರೆ ನಮ್ಮ ಪಕ್ಷದಲ್ಲಿ ಕಾರ್ಯಕರ್ತರಿಗೆ
ನಾಯಕ ಮಾಡುವ ಶಕ್ತಿಯಿದೆ. ಇದಕ್ಕೇ ನಾನೇ ಉದಾಹರಣೆ” ಎಂದು ಖೂಬಾ ಹೇಳಿದ್ದಾರೆ.

Advertisements
b khuba 1
ಕೇಂದ್ರ ಸಚಿವ ಭಗವಂತ ಖೂಬಾ

“ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ, ಜನರು
ಅಭಿವೃದ್ದಿ ಕೆಲಸಗಳು ನೋಡದೆ ಹೈರಾಣಾಗಿದ್ಧಾರೆ. ಯಾವುದಕ್ಕೂ ಸರ್ಕಾರದಲ್ಲಿ ದುಡ್ಡಿಲ್ಲ, ಕೇವಲ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ಧಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದೆ, ರೈತರಿಗೆ ಪರಿಹಾರ ಧನ ನೀಡಿಲ್ಲ, ಪಿಎಮ್ ಕಿಸಾನ್ ದುಡ್ಡು ಬಂದ್ ಮಾಡಿದ್ದಾರೆ, ನೀರಾವರಿ ಯೋಜನೆಗಳಿಗೆ ದುಡ್ಡು ನೀಡುತ್ತಿಲ್ಲ, ಶಾಲಾ ಕಾಲೇಜು ಮಕ್ಕಳ ವಿದ್ಯಾರ್ಥಿವೇತನ ಸಹ ಸರಿಯಾಗಿ ನೀಡುತ್ತಿಲ್ಲ. ಕೇವಲ ಅವರ ರಾಜಕೀಯ ಶಕ್ತಿ ತೊರಿಸಲು ಕಾರ್ಯಕ್ರಮಗಳು ನಡೆಸುತ್ತಾ ತಿರುಗಾಡುತ್ತಿದ್ದಾರೆ” ಎಂದು ಖೂಬಾ ಟೀಕಿಸಿದ್ದಾರೆ.

“ರಾಜ್ಯದ ಜನತೆ ಎಲ್ಲಾ ಬೆಳವಣಿಗೆಗಳು ಗಮನಿಸುತ್ತಿದ್ದಾರೆ, ಕಳೆದ ಒಂಬತ್ತುವರೆ ವರ್ಷಗಳಲ್ಲಿ ದೇಶಕ್ಕೆ ನರೇಂದ್ರ ಮೋದಿ ಅವರ ನೇತೃತ್ವ, ಅಭಿವೃದ್ದಿ ಕೆಲಸಗಳಿಂದ ಜನರು ಸಂತೋಷದಿಂದ ಬದುಕುತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾನು ಬೀದರ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಐತಿಹಾಸಿಕ ಅಭಿವೃದ್ದಿ ಕೆಲಸಗಳು ಮಾಡಿರುವೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ ಮೋದಿಯವರ ನಾಯಕತ್ವಕ್ಕೆ ಮತ್ತೊಮ್ಮೆ ಜನ ಆಡಳಿತದ ಚುಕ್ಕಾಣಿ ನೀಡಲಿದ್ದಾರೆ” ಎಂದು ಕೇಂದ್ರ ಸಚಿವ ಖೂಬಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ಗ್ಯಾರಂಟಿ ಪೊಳ್ಳು: ಶಾಸಕ ಶೈಲೇಂದ್ರ ಬೆಲ್ದಾಳೆ

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ದೇಶದ ಸುರಕ್ಷತೆ, ಸದೃಢತೆ, ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಫಲಿತಾಂಶ ಸಾಕ್ಷಿಯಾಗಿದೆ‌. ಮೋದಿ ಅವರ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ ಎಂದು  ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದ್ದಾರೆ.

“ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ನಿಚ್ಚಳ ಬಹುಮತದಿಂದ ಗೆದ್ದಿದೆ‌. ರಾಜಸ್ಥಾನ ಹಾಗೂ ಛತ್ತೀಸಗಢದಲ್ಲಿ ಭರ್ಜರಿ ಜಯ ದಾಖಲಿಸಿದ್ದು, ಕಾಂಗ್ರೆಸ್ ಧೂಳಿಪಟವಾಗಿದೆ. ಬರುವ ಲೋಕಸಭಾ‌ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಬಿಜೆಪಿ ಜಯಗಳಿಸಿ ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಲಿದ್ದಾರೆ ಎಂಬುದಕ್ಕೆ ಇದು ಸ್ಪಷ್ಟ ದಿಕ್ಸೂಚಿಯಾಗಿದೆ” ಎಂದು ಭವಿಷ್ಯ ನುಡಿದರು.

“ಕಾಂಗ್ರೆಸ್ ಗೆ ದೇಶದ ಜನರು ತಿರಸ್ಕರಿಸಲು ನಿರ್ಧರಿಸಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ. ಈ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ವಿಲಿವಿಲಿ ಒದ್ದಾಡುವಂತಾಗಿದೆ‌. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಸನ್ನಿಹಿತವಾಗಿದೆ” ಎಂದು ಟೀಕಿಸಿದರು.

“ತೆಲಂಗಾಣದಲ್ಲಿ ಬಿಜೆಪಿ ತನ್ನ ಶಕ್ತಿಯನ್ನು ವೃದ್ಧಿಸಿಕೊಂಡಿದೆ. ಇದು ಬರುವ ದಿನಗಳಲ್ಲಿ ತೆಲಂಗಾಣದಲ್ಲಿ ಸಹ ಕೇಸರಿ ಪಡೆ ತನ್ನ ನೆಲೆ ಭದ್ರಪಡಿಸಿಕೊಳ್ಳುವುದನ್ನು ಖಾತ್ರಿಪಡಿಸಿದೆ. ಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸುವುದು ಖಚಿತ ಎಂಬುದು ಈ ಫಲಿತಾಂಶ ಸಾಬೀತುಪಡಿಸಿದೆ. ಮೂರು ರಾಜ್ಯಗಳಲ್ಲಿನ ಗೆಲುವು ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದ್ದು ಮುಂದಿನ ಲೋಕಸಭೆ ಚುನಾವಣೆ ತಯಾರಿ ಉತ್ಸಾಹ ಹೆಚ್ಚಿಸಿದೆ ” ಎಂದರು.

ಮುಂದಿನ ದಿನಗಳಲ್ಲಿ ದೇಶದಿಂದ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ: ಶಾಸಕ ಪ್ರಭು ಚವ್ಹಾಣ

ಪಂಚ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ ಏಣಿಕೆಯಾದ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ದೇಶದೆಲ್ಲೆಡೆ ಬಿಜೆಪಿ ಅಲೆಯಿದೆ ಎನ್ನುವುದನ್ನು ಸಾಬೀತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ.

prabhu chavan
ಶಾಸಕ ಪ್ರಭು ಚವ್ಹಾಣ

“ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳಲ್ಲಿ ಬಿಜೆಪಿ ದಾಖಲೆಯ ಗೆಲುವು ಸಾಧಿಸಿದೆ. ತೆಲಂಗಾಣ ರಾಜ್ಯದಲ್ಲಿಯೂ ಬಿಜೆಪಿ ತನ್ನ ಶಕ್ತಿಯನ್ನು ವೃದ್ಧಿಸಿಕೊಂಡಿದೆ‌. ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನ ಉಚಿತ ಗ್ಯಾರಂಟಿ ಯೋಜನೆಗಳು ಅಲ್ಪಕಾಲದ ಯೋಜನೆಗಳೆಂದು ಜನತೆಗೆ ಮನವರಿಕೆಯಾಗಿದೆ. ಹಾಗಾಗಿ ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಗಳು ಈ ಚುನಾವಣೆಯಲ್ಲಿ‌ ಅಷ್ಟೊಂದು ಪ್ರಭಾವ ಬೀರಿಲ್ಲ. ಮುಂದಿನ ದಿನಗಳಲ್ಲಿ ದೇಶದಿಂದ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ಫಲಿತಾಂಶ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆ: ಪ್ರಧಾನಿ ನರೇಂದ್ರ ಮೋದಿ

“ಜನತೆ ಅಭಿವೃದ್ಧಿ ಪರವಾಗಿರುವ ಮತ್ತು ಸರ್ವರ ಏಳಿಗೆ ಬಯಸುವ ಬಿಜೆಪಿ ಪಕ್ಷವನ್ನು ಮತ್ತು ದೇಶದ ಸಮಗ್ರ‌ ಅಭಿವೃದ್ಧಿಗೆ ದುಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೆಲಸಗಳಿಗೆ ಮನ್ನಣೆ ನೀಡಿದ್ದಾರೆ. ಈ ಚುನಾವಣೆ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಂತಿದ್ದು, ಪುನಃ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ” ಎಂದು ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X