ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ವೇಳೆ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ. ಆದರೂ, ಸೋಮವಾರ ಕರ್ನಾಟಕ ಗಡಿ ಪ್ರವೇಶಿಸಲು ಎಂಇಎಸ್ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು ತಡೆದಿದ್ದಾರೆ,
ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ನಿರಂತರ ಹೇಳುತ್ತಲೇ ಬಂದಿರುವ ಎಂಇಎಸ್, ಕನ್ನಡ ರಾಜ್ಯೋತ್ಸವ, ಬೆಳಗಾವಿ ಅಧಿವೇಶನದ ಸಮಯದಲ್ಲಿ ತಗಾದೆ ತೆಗೆಯುತ್ತಲೇ ಬಂದಿದೆ. ಈಗ, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ಮಹಾಮೇಳಾವ್ ನಡೆಸಲು ಮುಂದಾಗಿತ್ತು.
ಆದರೆ, ಬೆಳಗಾವಿ ಜಿಲ್ಲಾಧಿಕಾರಿಗಳು ಮಹಾವೇಳಾವ್‌ಗೆ ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಗಡಿ ಗ್ರಾಮ ಶಿನೋಳಿಯಲ್ಲಿ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಗೂ ಮುನ್ನ ಕರ್ನಾಟಕ ಗಡಿ ಪ್ರವೇಶಿಸಲು ಎಂಇಎಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಅವರನ್ನು ಗಡಿಯಲ್ಲಿಯೇ ಪೊಲೀಸರು ತಡೆದಿದ್ದಾರೆ. ಬಳಿಕ, ಬೆಳಗಾವಿ-ವೆಂಗುರ್ಲಾ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.