ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸೋಮವಾರ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು, “ದೌರ್ಜನ್ಯ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಇಲಾಖೆಯ ತನಿಖೆಯಾಗಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಕೀಲನ ಮೇಲೆ ಪೊಲೀಸ್ ದೌರ್ಜನ್ಯದ ತನಿಖೆ ಸಿಐಡಿ ಹೆಗಲಿಗೆ
ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಉಪಾಧ್ಯಕ್ಷ ಮನೋರಾಜ್ ರಾಜೀವ್, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ, ಹಿರಿಯ ವಕೀಲ ಶಂಭು ಶರ್ಮ, ನರಸಿಂಹ ಹೆಗ್ಡೆ, ಟಿ ನಾರಾಯಣ ಪೂಜಾರಿ, ಎಂ ಆರ್ ಬಳ್ಳಾಲ್, ಸುಬ್ಬಯ ರೈ ಸೇರಿದಂತೆ ಇತರರು ಇದ್ದರು.