ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಜನರ ತೀರ್ಮಾನವನ್ನು ಗೌರವಿಸುವ ಜೊತೆಗೆ ಸೋಲಿನ ಕಾರಣಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಚಿವ ಜಮೀರ್ ಅಹ್ಮದ್ ಅವರು ಮುಸ್ಲಿಂ ಸಮುದಾಯದ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಬೇಕು ಎಂಬ ಹೇಳಿಕೆಗೆ ಬಿಜೆಪಿಯವರು ಅವರ ರಾಜೀನಾಮೆಯನ್ನು ಕೇಳುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, “ಸಚಿವ ಜಮೀರ್ ಅಹ್ಮದ್ ಅವರು ಉದ್ದೇಶಪೂರ್ವಕವಾಗಿ ಈ ಹೇಳಿಕೆಯನ್ನು ನೀಡಿಲ್ಲ” ಎಂದರು.
ವಿಧಾನಸಭೆಯ ಒಳಗೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಈ ವಿಷಯದ ಬಗ್ಗೆ ಸಭಾಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ” ಎಂದರು.