ಮಂಡ್ಯ | ರೈತರಿಂದ ಖರೀದಿಸುವ ಹಾಲಿನ ದರ 1.5 ರೂ. ಕಡಿತ; ಮನ್ಮುಲ್ ವಿರುದ್ಧ ಆಕ್ರೋಶ

Date:

Advertisements

ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ಮುಲ್‌) ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 1.5 ರೂ. ಕಡಿತ ಮಾಡಿದೆ. ಬರದ ಪರಿಸ್ಥತಿಯಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಜಿಲ್ಲೆಯ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜಿಲ್ಲೆಯ ಏಳು ತಾಲೂಕುಗಳು ಬರಪೀಡತವೆಂದು ಸರ್ಕಾರ ಘೋಷಿಸಿದೆ. ಬರ ಪರಿಹಾರ ಬಿಡುಗಡೆ ಮಾಡಿ, ಜಾನುವಾರಗಳಿಗೆ ನೀರು, ಮೇವು ಖರೀದಿಗೆ ಬಳಸುವಂತೆ ಹೇಳಿದೆ. ಆದರೆ, ಇದೇ ಸಂದರ್ಭದಲ್ಲಿ ಮನ್ಮುಲ್‌ ಹಾಲಿನ ದರ ಕಡಿತ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿದೆ” ಎಂದು ಮಂಡ್ಯದ ರೈತ ಸಂತೋಷ್ ಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜಿಲ್ಲೆಯ ಬಹುತೇಕ ಲಕ್ಷಾಂತರ ಜನರು ಹೈನುಗಾರಿಕೆ ಮಾಡಿಕೊಂಡು ಬದುಕು ದೂಡುತ್ತಿವೆ. ಈ ಹಿಂದೆ, ಮಳೆ ಚೆನ್ನಾಗಿ ಆಗಿ ಹಾಲು ಉತ್ಪಾದನೆ ಹೆಚ್ಚಾದಾಗ ಮಾತ್ರ ಹಾಲಿನ ದರ ಕಡಿತ ಮಾಡುತ್ತಿದ್ದರು. ಈಗ, ಬರ ಇದ್ದರೂ ಹಾಲಿನ ದರ ಕಡಿತ ಮಾಡಿದ್ದಾರೆ. ಸಹಕಾರ ತತ್ವವನ್ನೇ ಬುಡಮೇಲು ಮಾಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

Advertisements

“ರಾಜ್ಯದ ಯಾವುದೇ ಹಾಲು ಒಕ್ಕೂಟವು ಹಾಲಿನ ದರ ಕಡಿತ ಮಾಡಬಾರದು ಎಂದು ಪಶುಸಂಗೋಪನಾ ಸಚಿವರು ಇತ್ತೀಚೆಗಷ್ಟೇ ಹೇಳಿದ್ದರು. ಆದರೂ, ಮನ್ಮುಲ್ ಹಾಲಿನ ದರ ಇಳಿಸಿದೆ. ಮೇವು, ಹಾಲು ಉತ್ಪಾದನ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಗೊತ್ತಿದ್ದರೂ, ಹಾಲು ಒಕ್ಕೂಟ ಇಂತಹ ಧೋರಣೆಯನ್ನು ಅನುಸರಿಸುತ್ತಿದೆ. ಕೂಡಲೇ, ಹಾಲಿನ ದರ ಕಡಿತ ಮಾಡಿರುವ ಆದೇಶವನ್ನು ಹಿಂಪಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X