ಕೊಡಗು | ಗ್ರಾಮದಲ್ಲಿ ಕಾಡಾನೆ, ಹುಲಿ ಹಾವಳಿ; ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ; ಆರೋಪ

Date:

Advertisements

ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಬಳಿಯ ಕೋಳತೋಡು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಹಲವು ತಿಂಗಳಿಂದ ನಡೆಯುತ್ತಿರುವ ವನ್ಯಜೀವಿಗಳ ಉಪಟಳದಿಂದಾಗಿ ಜನ ಬೇಸತ್ತು ಹೋಗಿದ್ದಾರೆ. ಕಾಡಿನಲ್ಲಿ ಇರಬೇಕಾದ ವನ್ಯಜೀವಿಗಳು ನಾಡಿಗೆ ಬಂದು ಕೃಷಿಕರಿಗೆ ತೀವ್ರ ತೊಂದರೆ ನೀಡುತ್ತಿವೆ. ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಗ್ರಾಮದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿಗಳ ಹಾವಳಿ ಬಗ್ಗೆ ಮಾತನಾಡಿದ ಗ್ರಾಮದ ಮುರುವಂಡ ಸಾವನ್, “ಹಲವು ತಿಂಗಳಿಂದ ಹುಲಿಯೊಂದು ಗ್ರಾಮದಲ್ಲಿ ನಿರಂತರವಾಗಿ ಅಡ್ಡಾಡುತ್ತಿದೆ. ತನ್ನ ಮರಿಯೊಂದಿಗೆ ಆಗಿದ್ದಾಗೆ ಜನರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಗ್ರಾಮಸ್ಥರು ಭಯದಿಂದಲೇ ದಿನ ಕಳೆಯುವಂತಾಗಿದೆ. ಕಳೆದ ಎರಡು ದಿನಗಳ ಹಿಂದೆ ಗ್ರಾಮಸ್ಥರೊಬ್ಬರ ಎರಡು ನಾಯಿಗಳು ಕಾಣೆಯಾಗಿದ್ದು, ಇವುಗಳು ಹುಲಿಯ ದಾಳಿಗೆ ಬಲಿಯಾಗಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

Advertisements

“ಹುಲಿ ಸಂಚಾರದಿಂದಾಗಿ ಕಾರ್ಮಿಕರು ಭಯಪಡುತ್ತಿದ್ದು, ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದು ಕೃಷಿ ಚಟುವಟಿಕೆಗಳಿಗೆ ನೇರ ಪರಿಣಾಮ ಬೀರುತ್ತಿದೆ. ಅಲ್ಲದೆ ಈ ಭಾಗದಲ್ಲಿರುವ ಕೃಷಿಕರ ಮತ್ತು ಕೃಷಿ ಕಾರ್ಮಿಕರ ಮಕ್ಕಳು ಪ್ರತಿನಿತ್ಯ ಆತಂಕದಲ್ಲೇ ಶಾಲಾ-ಕಾಲೇಜುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ” ಎಂದು ಸಾವನ್ ವಿವರಿಸಿದ್ದಾರೆ.

“ಗ್ರಾಮದ ಸಣ್ಣ ಮತ್ತು ಅತಿ ಸಣ್ಣ ಭತ್ತದ ಕೃಷಿಕರು ತಮಗಿರುವ ಅಲ್ಪ ಸ್ವಲ್ಪ ಗದ್ದೆಯಲ್ಲಿ ಭತ್ತದ ಕೃಷಿ ಮಾಡಿದ್ದಾರೆ. ಇದೀಗ ಭತ್ತ ಕೊಯ್ಲಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ಲಗ್ಗೆ ಇಡುವ ಕಾಡಾನೆಗಳ ಹಿಂಡು ಭತ್ತದ ಗದ್ದೆಗೆ ನುಗ್ಗಿ ಇಡೀ ಕೃಷಿಯನ್ನೇ ನಾಶಗೊಳಿಸುತ್ತಿದೆ. ಪ್ರತಿ ದಿನ ರಾತ್ರಿ ಗದ್ದೆ ಭಾಗದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ತೆರೆಗಳನ್ನು ತುಳಿದು ಧ್ವಂಸ ಮಾಡುತ್ತಿದೆ ಎಂದು ಸಮಸ್ಯೆ ವಿವರಿಸಿದ ಸಾವನ್, ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ ವಿವಿಧ ನೆಪಗಳನ್ನು ಒಡ್ಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ” ಎಂದು ಆಪಾದಿಸಿದ್ದಾರೆ.

“ಭತ್ತ ಕೃಷಿ ಕಟಾವಿಗೆ ಬಂದಿದ್ದು, ವನ್ಯ ಪ್ರಾಣಿಗಳಿಂದ ಬೆಳೆಗಳಿಗೆ ರಕ್ಷಣೆ ನೀಡಬೇಕಾಗಿರುವುದು ಅರಣ್ಯ ಇಲಾಖೆಯ ಹೊಣೆಗಾರಿಕೆಯಾಗಿದೆ. ಆದ್ದರಿಂದ ಗ್ರಾಮದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಹುಲಿಯ ಸೆರೆಗಾಗಿ ಬೋನನ್ನು ಅಳವಡಿಸಿ ಅರಣ್ಯ ಇಲಾಖೆ ಗ್ರಾಮದಲ್ಲಿ ಗಸ್ತು ನಡೆಸಬೇಕು. ಗ್ರಾಮಕ್ಕೆ ಲಗ್ಗೆ ಇಡುವ ಕಾಡಾನೆಗಳನ್ನು ಕಾಡಿಗಟ್ಟಿ ಅವುಗಳು ನಾಡಿಗೆ ಬರದಂತೆ ಸೂಕ್ತ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಗ್ರಾಮಸ್ಥರ ಪರವಾಗಿ ಒತ್ತಾಯಿಸಿರುವ ಸಾವನ್, ಇನ್ನಾದರೂ ಅರಣ್ಯ ಇಲಾಖೆ ಸ್ಪಂದಿಸದಿದ್ದಲ್ಲಿ ಗ್ರಾಮದ ಮಹಿಳೆಯರು ಸೇರಿದಂತೆ ಸಾರ್ವಜನಿಕರೊಡಗೂಡಿ ಅರಣ್ಯ ಇಲಾಖೆಯ ಕಚೇರಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X