ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 115 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಾರೂಢ ಕಾಂಗ್ರೆಸ್ ಅನ್ನು ಸೋಲಿಸಿ ಮತ್ತೆ ಅಧಿಕಾರದ ಗದ್ದುಗೆಗೆ ಏರಿದೆ.
ಈ ನಡುವೆ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಗೂ ಮುನ್ನವೇ ಜೈಪುರದ ಹವಾ ಮಹಲ್ ಕ್ಷೇತ್ರದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರು ಮುಸ್ಲಿಮರ ಮಾಲೀಕತ್ವದ ಹೋಟೆಲ್ಗಳ ಮೇಲೆ ದಾಳಿ ನಡೆಸಿದ್ದು, ರಸ್ತೆಯ ಬದಿಗಳಲ್ಲಿರುವ ಮಾಂಸಾಹಾರಿ ಹೋಟೆಲ್ಗಳನ್ನು ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಅಧಿಕಾರಿಯೊಬ್ಬರಿಗೆ ಕರೆ ಮಾಡಿ, ‘ರಸ್ತೆ ಬದಿಯಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಸಂಜೆ ಒಳಗೆ ಮುಚ್ಚಿಸಬೇಕು’ ಎಂದು ಸೂಚನೆ ನೀಡಿದ್ದಾರೆ.
This is from Jaipur, Rajasthan.
Newly elected BJP MLA Balmukund Acharya and his supporters targeted Muslim owned non-veg hotels. pic.twitter.com/Wp3jp45V5b
— Md Asif Khan (@imMAK02) December 4, 2023
‘ನಾನ್ ವೆಜ್ ಅನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದೋ ಅಥವಾ ಇಲ್ಲವೋ ಉತ್ತರಿಸಿ. ಹಾಗಾದ್ರೆ ನೀವು ಇದನ್ನು ಬೆಂಬಲಿಸುತ್ತೀರಿ. ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ನಿಮ್ಮಿಂದ ವರದಿ ತರಿಸಿಕೊಳ್ಳುತ್ತೇನೆ. ಅಧಿಕಾರಿ ಯಾರೆಂಬುದನ್ನು ಸಹ ನಾನು ನೋಡುವುದಿಲ್ಲ’ ಎಂದು ಬಾಲಮುಕುಂದ್ ಆಚಾರ್ಯ ಶಾಸಕನಾಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಎಚ್ಚರಿಕೆ ನೀಡಿದ್ದಾರೆ.
ಈ ವೈರಲ್ ವಿಡಿಯೋ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿದ್ದು, ‘ಇಂತಹದನ್ನು ಓರ್ವ ಶಾಸಕನಾಗಿ ಆಯ್ಕೆಯಾದವನು ಅದು ಹೇಗೆ ಮಾಡುತ್ತಾರೆ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
Location: Jaipur, Rajasthan
A day after winning state elections, BJP legislator Balmukund Acharya & his far-right supporters targeted Muslim-owned restaurants. pic.twitter.com/KfX68sIpTS
— HindutvaWatch (@HindutvaWatchIn) December 4, 2023
‘ಈ ಆದೇಶ ಸರಿಯಲ್ಲ. ನಮ್ಮ ದೇಶದಲ್ಲಿ ಮಾಂಸಾಹಾರವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಯಾರಾದರೂ ಮಾಂಸಾಹಾರಿ ಆಹಾರದ ಮಳಿಗೆ ಸ್ಥಾಪಿಸಲು ಬಯಸಿದರೆ ಅದನ್ನು ತಡೆಯುವುದು ಹೇಗೆ?’ ಎಂದು ಪ್ರಶ್ನೆ ಮಾಡಿದ್ದಾರೆ.
600 ಮತಗಳಿಂದ ಗೆಲುವು ಪಡೆದಿದ್ದ ಬಾಲಮುಕುಂದ್ ಆಚಾರ್ಯ
ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರು ರಾಜಸ್ಥಾನದ ಹವಾ ಮಹಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಆರ್ಆರ್ ತಿವಾರಿ ಅವರನ್ನು 600 ಮತಗಳಿಂದ ಸೋಲಿಸುವ ಮೂಲಕ ಶಾಸಕನಾಗಿ ಆಯ್ಕೆಯಾಗಿದ್ದಾರೆ.
ಸಂಪ್ರದಾಯದಂತೆ ಸರ್ಕಾರ ಬದಲಾಯಿಸಿದ ಮತದಾರರು
ಕಾಂಗ್ರೆಸ್ ಕೈಯಲ್ಲಿದ್ದ ರಾಜಸ್ಥಾನ ಕಮಲದ ತೆಕ್ಕೆಗೆ ಜಾರಿದೆ. 199 ಸ್ಥಾನಗಳ ಪೈಕಿ 115 ಸ್ಥಾನಗಳಲ್ಲಿ ಬಿಜೆಪಿ ಗೆದ್ದುಕೊಂಡಿದೆ. 69 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದುಕೊಂಡಿದೆ.
ಭಾರತ್ ಆದಿವಾಸಿ ಪಕ್ಷದಿಂದ ಮೂವರು ಶಾಸಕರು, ಬಹುಜನ ಸಮಾಜ ಪಕ್ಷ(ಬಿಎಸ್ಪಿ)ಯಿಂದ ಇಬ್ಬರು, ರಾಷ್ಟ್ರೀಯ ಲೋಕದಳದಿಂದ ಹಾಗೂ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದಿಂದ ತಲಾ ಓರ್ವ ಹಾಗೂ ವಿಶೇಷವಾಗಿ ಎಂಟು ಮಂದಿ ಸ್ವತಂತ್ರ ಅಭ್ಯರ್ಥಿಗಳು ಜಯಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ಮೂವತ್ತು ವರ್ಷಗಳಲ್ಲಿ ಆಡಳಿತ ಪಕ್ಷ ಚುನಾವಣೆಯಲ್ಲಿ ಮತ್ತೊಮ್ಮೆ ಆರಿಸಿ ಬಂದು ಅಧಿಕಾರ ಹಿಡಿದದ್ದೇ ಇಲ್ಲ. ಮತದಾರರು ಆಳುವ ಪಕ್ಷವನ್ನು ಸೋಲಿಸುತ್ತಲೇ ಬಂದಿದ್ದಾರೆ. ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ. ಈ ಬಾರಿಯೂ ಅದನ್ನೇ ಮತದಾರರು ಮುಂದುವರಿಸಿದ್ದಾರೆ.