ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರ ಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರವು ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಸಂಪೂರ್ಣ ವಿಡಿಯೋ ಬದಲಿಗೆ ಅರ್ಧ ತುಂಡರಿಸಿದ್ದ ವಿಡಿಯೋವನ್ನಿಟ್ಟುಕೊಂಡು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಆ ಬಳಿಕ ಇದನ್ನೇ ಬಂಡವಾಳವನ್ನಾಗಿಸಿಕೊಂಡಿದ್ದ ಬಿಜೆಪಿ ಐಟಿ ಸೆಲ್, ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಹಿಂದೆಂದೂ ನಡೆದುಕೊಂಡಿಲ್ಲ. ಯೋಧನ ಸಾವಿನ ವಿಚಾರದಲ್ಲಿ ತಮ್ಮ ಹೀನ ಮನಸ್ಥಿತಿಯನ್ನು ತೋರಿಸಿದ್ದಾರೆ ಎಂದು ದೂರಿತ್ತು. ಅದು ವೈರಲ್ ಆಗಿತ್ತು.
ಬಳಿಕ ಸ್ಪಷ್ಟೀಕರಣ ನೀಡಿದ್ದ ಸಿಎಂ ಕಚೇರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಅವರ ಕುಟುಂಬದ ಸದಸ್ಯರಿಗೆ ಅಧಿಕಾರಿಗಳ ಮೂಲಕ ಸರ್ಕಾರದ ವತಿಯಿಂದ ಇಂದು(ಡಿ.5) ನೀಡಲಾಗಿತ್ತು.
ಆ ಬಳಿಕ ಮತ್ತೆ ಖಾಸಗಿ ಸುದ್ದಿವಾಹಿನಿ ಟಿವಿ 9ನೊಂದಿಗೆ ಮಾತನಾಡಿರುವ ಸಂಪೂರ್ಣ ವಿಡಿಯೋವನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ‘ರಾಜಕೀಯ ದುರುದ್ದೇಶದಿಂದ ಸಂಸದ ತೇಜಸ್ವಿ ಸೂರ್ಯ ವಿಡಿಯೋವನ್ನು ತಿರುಚಿ ಹಂಚಿಕೊಂಡಿದ್ದಾರೆ. ಸಂಸದ ಹುತಾತ್ಮ ಪ್ರಾಂಜಲ್ ಕುಟುಂಬ ಮಾತ್ರವಲ್ಲ ಸಮಸ್ತ ಯೋಧರಿಗೆ ಮಾಡಿರುವ ಅವಮಾನ’ ಎಂದು ಕಿಡಿಕಾರಿದ್ದಾರೆ.
ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು… pic.twitter.com/vV6ro2i9Gw
— Siddaramaiah (@siddaramaiah) December 5, 2023
ತಮ್ಮ ಟ್ವೀಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್ ಅನ್ನು ಹುತಾತ್ಮ ಪ್ರಾಂಜಲ್ ಅವರ ಕುಟುಂಬಕ್ಕೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
“ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ – ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ” ಎಂದು ತಿಳಿಸಿದ್ದಾರೆ.
“Who is Capt Pranjal?”
“When did we announce any compensation to his family?”
“The question of granting compensation arises only if we have promised.”
Such callous, irresponsible & insensitive statements by CM Shri @siddaramaiah have insulted all the martyrs. He has behaved in… pic.twitter.com/qTVcO2nzcE
— Tejasvi Surya (@Tejasvi_Surya) December 4, 2023
“ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಈ ಬಿಜೆಪಿ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.