ಹುಮನಾಬಾದ್ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದಲ್ಲಿರುವ ಅಂಚೆ ಕಚೇರಿ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕನ್ನಡ ಸೇನೆ ಕರ್ನಾಟಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹುಮನಾಬಾದ್ ತಹಶೀಲ್ದಾರ್ ಅವರಿಗೆ ಸಲ್ಲಿಸಿದ್ದಾರೆ.
“ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣವು ಪುರಸಭೆ ಹಾಗೂ ಹೋಬಳಿ ಕೇಂದ್ರವಾಗಿದ್ದು, ಜನಸಂಖ್ಯೆ ಹೆಚ್ಚಾಗಿದೆ. ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿರುವ ಅಂಚೆ ಕಚೇರಿ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. ಬೀಳುವ ಹಂತದಲ್ಲಿರುವ ಕಟ್ಟಡದಿಂದ ಸಾರ್ವಜನಿಕರು, ಅಧಿಕಾರಿಗಳಿಗೆ ಆತಂಕ ಉಂಟಾಗಿದೆ” ಎಂದರು
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ ಅಧಿವೇಶನ | ಎರಡು ವಿಧೇಯಕ, ಒಂದು ಚುನಾವಣೆ ಪ್ರಸ್ತಾವ ಅಂಗೀಕಾರ
ಈ ಸಂದರ್ಭದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಸುಭಾಷ ಕೆನಾಡೆ, ರಾಜ್ಯ ಉಪಾಧ್ಯಕ್ಷ ಡಾ. ರವಿ ಸ್ವಾಮಿ, ಹುಮನಾಬಾದ್ ತಾಲೂಕಾಧ್ಯಕ್ಷ ಮಹೆಬೂಬ್, ಜಿಲ್ಲಾ ಉಪಾಧ್ಯಕ್ಷ ದತ್ತು ಲದ್ದೆ ಸೇರಿದಂತೆ ಸೋಮನಾಥ ಮಡಿವಾಳ, ಸೋಮು ಸ್ವಾಮಿ, ನಾಗನಾಥ ಗಾದಾ, ಇದ್ದರು.
ವರದಿ ಮಾಹಿತಿ : ಭೀಮರೆಡ್ಡಿ ಸಿಂಧನಕೇರಾ