ಬೆಳಗಾವಿ ಅಧಿವೇಶನ | ಬೆಂಗಳೂರಿಗೆ ಹೊಸ ರೂಪ ನೀಡಲು ʼಬ್ರ್ಯಾಂಡ್‌ ಬೆಂಗಳೂರುʼ ಯೋಜನೆ: ರಾಮಲಿಂಗಾ ರೆಡ್ಡಿ

Date:

Advertisements

ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ  ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಬ್ರ್ಯಾಂಡ್ ಬೆಂಗಳೂರು ಹಾಗೂ ಅದರ ಅಧ್ಯಯನ ವರದಿ ಸ್ವೀಕೃತಿ ಹಾಗೂ ಮುಂದಿನ ಕ್ರಮಗಳ ವಿಚಾರವಾಗಿ ಪ್ರಶ್ನೆ ಕೇಳಿದರು.

ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉತ್ತರಿಸಿದರು.

Advertisements

“ಬೆಂಗಳೂರು ನಗರ ಈ ಹಿಂದೆ ಗಾರ್ಡನ್ ಸಿಟಿ, ಪ್ಯಾರಡೈಸ್ ಆಫ್ ಪೆನ್ಷನರ್ಸ್, ಹಾಸ್ಪಿಟಲ್ ಹಬ್, ಐಟಿ ಹಬ್, ಎಜುಕೇಶನ್ ಹಬ್ ಆಗಿ ಹೆಸರು ಮಾಡಿತ್ತು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿಂದೆ ವಿಶ್ವ ನಾಯಕರು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ತೆರಳುತ್ತಿದ್ದರು. ಬೆಂಗಳೂರಿನ ಸ್ವರೂಪವನ್ನು ಬದಲಿಸಲು ನಮ್ಮ ಉಪಮುಖ್ಯಮಂತ್ರಿಗಳು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಮೂಲಕ ಕೆಲಸ ಮಾಡಲು ಮುಂದಾಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಅಧಿವೇಶನ | ಎರಡು ವಿಧೇಯಕ, ಒಂದು ಚುನಾವಣೆ ಪ್ರಸ್ತಾವ ಅಂಗೀಕಾರ

“ಬೆಂಗಳೂರಿನ ಸಂಘ ಸಂಸ್ಥೆಗಳು, ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಸುಗಮ ಸಂಚಾರ ಬೆಂಗಳೂರು, ಹಸಿರು ಬೆಂಗಳೂರು, ಆರೋಗ್ಯ ಬೆಂಗಳೂರು, ಜನಹಿತ ಬೆಂಗಳೂರು, ಶೈಕ್ಷಣಿಕ ಬೆಂಗಳೂರು, ತಂತ್ರಜ್ಞಾನ ಮತ್ತು ಮಾಹಿತಿ ಬೆಂಗಳೂರು, ಹಸಿರು ಬೆಂಗಳೂರು, ಜಲ ಸುರಕ್ಷ ಬೆಂಗಳೂರು ಬಗ್ಗೆ 70 ಸಾವಿರ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಈ ಪ್ರತಿ ವಿಭಾಗಕ್ಕೆ ಸಂಬಂಧಿಸಿದ ಸಲಹೆಗಳನ್ನು ವಿವಿಧ ಸಂಸ್ಥೆಗಳಿಗೆ ಅಧ್ಯಯನಕ್ಕೆ ನೀಡಲಾಗಿದೆ. ಈ ಸಂಸ್ಥೆಗಳು ವರದಿ ನೀಡಿದ ನಂತರ ಈ ಕುರಿತ ಸಲಹೆಗಳನ್ನು ಜಾರಿಗೊಳಿಸಲಾಗುವುದು” ಎಂದು ತಿಳಿಸಿದರು.

“ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ಸರ್ಕಾರದ ಮುಖ್ಯಕಾರ್ಯದರ್ಶಿಗಳ ಮಟ್ಟದಲ್ಲಿ ಬೃಹತ್ ಬೆಂಗಳೂರು ಕಾರ್ಯಕಾರಿ ಸಮಿತಿ ಮಾಡಿ ಬೆಂಗಳೂರನ್ನು ಹೊಸ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ನಮ್ಮ ಉಪಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ನಾವು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಮುಂದೆ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದು, ಇದು ವಿರೋಧ ಪಕ್ಷದ ನಾಯಕರಿಗೆ ಅರ್ಥವಾಗುತ್ತಿಲ್ಲ” ಎಂದರು.

“ಬೆಂಗಳೂರಿನ ಅಭಿವೃದ್ಧಿಯನ್ನು ಯೋಜನಾಬದ್ಧವಾಗಿ ಮಾಡಲು ನಾವು ಬದ್ಧ. ಇದಕ್ಕೆ ಎಲ್ಲಾ ಪಕ್ಷಗಳ ಸಹಕಾರ ಮುಖ್ಯ. ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಏನೂ ಕೆಲಸ ಆಗಿಲ್ಲ ಎನ್ನುತ್ತೀರಿ. ನಿಮ್ಮ ಸರ್ಕಾರ 25 ಸಾವಿರ ಕೋಟಿ ಸಾಲ ಮಾಡಿಟ್ಟು ಹೋಗಿದ್ದೀರಿ. ಅದರ ಜೊತೆಗೆ ಬಿಲ್ ಬಾಕಿ. ನಗರೋತ್ಥಾನ, ವಾರ್ಡ್ ಅನುದಾನ ಸೇರಿದಂತೆ ಸಾಲ ಹೆಚ್ಚು ಮಾಡಿದ್ದೀರಿ. ಮುನಿರತ್ನ ಅವರು ಮೇಲ್ಸೇತುವೆ ವಿಚಾರವಾಗಿ ಮಾತನಾಡುತ್ತಿದ್ದರು. ಇದೇ ಚಾಲುಕ್ಯ ಸರ್ಕಲ್ ಮೇಲ್ಸೇತುವೆಗೆ ವಿರೋಧ ಮಾಡಿದವರೇ ಬಿಜೆಪಿಯವರು” ಎಂದು ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಹೊಸದಾಗಿ ನೀವು ಏನು ಮಾಡದೇ ಇರುವುದನ್ನು ಮೊದಲು ಸರಿಯಾಗಿ ಮಾಡಬೇಕು ರಾಮಲಿಂಗ ರೆಡ್ಡಿ ಆ ನೆಪದಲ್ಲಿ ಲೂಟಿ ಹೊಡೆಯುವುದಕ್ಕೆ ನೆಪ ಆಗುವುದು ಬೇಡ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X