ಬೆಳಗಾವಿ ಸದನದಲ್ಲಿ ಬಾರ್‌ಲೈಸನ್ಸ್ ಕುರಿತು ಕಾವೇರಿದ ಚರ್ಚೆ

Date:

Advertisements
  • ಸಿಎಲ್-7 ಸನ್ನದು ನೀಡಿಕೆ; ಲಾಡ್ಜಿಂಗ್ ವಿನ್ಯಾಸ ಸೇರ್ಪಡೆಗೆ ಕ್ರಮ: ತಿಮ್ಮಾಪುರ
  • ‘ಕಾನೂನು ತಂದು ಅನುಷ್ಠಾನಗೊಳಿಸುವುದಕ್ಕೆ ಕ್ರಮವಹಿಸಲಾಗುವುದು’

ಸದನದಲ್ಲಿ ಬಾರ್‌ಲೈಸೆನ್ಸ್ ನೀಡಿಕೆ ಸಂಬಂಧಿಸಿದಂತೆ ಕಾವೇರಿದ ಚರ್ಚೆ ಮಂಗಳವಾರ ವಿಧಾನಸಭೆಯಲ್ಲಿ ನಡೆಯಿತು.

ಸಿಎಲ್-7 ಸನ್ನದುಗಳ ನೀಡಿಕೆಯಲ್ಲಿ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ; ಮನಸ್ಸಿಗೆ ಬಂದಂತೆ ನೀಡಲಾಗುತ್ತಿದೆ ಎಂಬ ಸದಸ್ಯರ ಆರೋಪಗಳಿಗೆ ಉತ್ತರಿಸಿದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು, “ನಿಯಮಗಳ ಅನುಸಾರವೇ ಸಿಎಲ್-7 ಬಾರ್ ಲೈಸೆನ್ಸ್‌ ನೀಡಲಾಗಿದೆ. ಸಿಎಲ್-7 ಸನ್ನದುಗಳ ನೀಡಿಕೆಯ ಈಗಿರುವ ನಿಯಮಗಳಲ್ಲಿ ಲಾಡ್ಜಿಂಗ್ ವಿನ್ಯಾಸ ಎಷ್ಟಿರಬೇಕು ಮತ್ತು ಪಾರ್ಕಿಂಗ್ ಹೇಗಿರಬೇಕು ಎಂಬುದರ ಬಗ್ಗೆ ಯಾವುದೇ ಅಂಶಗಳಿಲ್ಲ. ಅದನ್ನು ಮುಂದಿನ ದಿನಗಳಲ್ಲಿ ಸೇರ್ಪಡೆಗೆ ಕ್ರಮವಹಿಸಲಾಗುವುದು” ಎಂದು ತಿಳಿಸಿದರು.

“ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಬಾರ್‌ ಲೈಸೆನ್ಸ್‌ಗಳ ನೀಡಿಕೆಯಲ್ಲಿ ಮೀಸಲಾತಿ ಅನುಷ್ಠಾನ ವಿಚಾರ ಸರಕಾರದ ಗಮನದಲ್ಲಿದ್ದು, ಕಾನೂನು ತಂದು ಅನುಷ್ಠಾನಗೊಳಿಸುವುದಕ್ಕೆ ಕ್ರಮವಹಿಸಲಾಗುವುದು” ಎಂದರು.

Advertisements

“ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 56 ಸಿಎಲ್-7 ಸನ್ನದುಗಳನ್ನು ಮಂಜೂರು ಮಾಡಲಾಗಿದೆ. ಕೋಲಾರ ಜಿಲ್ಲೆಯ ಅಬಕಾರಿ ಅಧೀಕ್ಷಕ ರಂಗಪ್ಪ ಅವರ ಮೇಲಿನ ಆರೋಪಗಳ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ವರದಿ ತರಿಸಿಕೊಳ್ಳಲಾಗುವುದು; ವರದಿ ಆಧರಿಸಿ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X