ವಿಜಯಪುರ | ಡಿ.7ರಂದು ಸುವರ್ಣಸೌಧಕ್ಕೆ ಮುತ್ತಿಗೆ: ರೈತ ಸಂಘ

Date:

Advertisements

ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಡಿಸೆಂಬರ್ 7ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಬೇಡಿಕೆಗಳನ್ನು ಈಡೇರಿಸುವವರೆಗೂ ಸುವರ್ಣಸೌಧದ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ರಾಹುಲ ಕುಬಕಡ್ಡಿ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರೈತರಿಗೆ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದು, ಅವುಗಳನ್ನು ಬಗೆಹರಿಸಬೇಕು. ಅದಕ್ಕಾಗಿ, ಸರ್ಕಾರದ ಮೇಲೆ ಒತ್ತಡ ತರಲು ಬೆಳಗಾವಿ ಚಲೋಗೆ ಕರೆ ಕೊಡಲಾಗಿದೆ: ಎಂದು ತಿಳಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮಾತನಾಡಿ, “ಬರಗಾಲದ ಕಾರಣದಿಂದಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಪ್ರತಿ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ರೈತರಿಗೆ ಕಂಟಕವಾಗಿರುವ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ಹಿಂಪಡೆಯಬೇಕು. ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು. ಕೃಷಿಗೆ ಹಗಲು 12 ಘಂಟೆಗಳ ಕಾಲ 3 ಫೆಸ್ ಹಾಗೂ ರಾತ್ರಿ ಸಿಂಗಲ್ ಫೆಸ್ ಉಚಿತ ವಿದ್ಯುತ್ ನೀಡಬೇಕು. 3-4 ವರ್ಷಗಳಿಂದ ಬಾಕಿ ಉಳಿದ ಬೆಳೆ ವಿಮೆಯನ್ನು ಕೂಡಲೇ ಕೊಡಬೇಕು” ಎಂದು ಆಗ್ರಹಿಸಿದರು.

Advertisements

“ಕೃಷ್ಣಾ ನದಿಯ ಆಲಿಮಟ್ಟಿ ಆಣೆಕಟ್ಟನ್ನು ಎತ್ತರಿಸಿ ಆದಕ್ಕೆ ನಷ್ಟಗೊಂಡ ರೈತರಿಗೆ ಪರಿಹಾರ ನೀಡಬೇಕು. ಕಬ್ಬಿಗೆ ಪ್ರತಿ ಟನ್‌ಗೆ 5,000 ರೂಪಾಯಿ ಘೋಷಣೆ ಮಾಡಬೇಕು. ಕಬ್ಬಿಗೂ ಬೆಳೆ ವಿಮೆ ವ್ಯವಸ್ಥೆ ಮಾಡಬೇಕು, ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಳೆಯುತ್ತಿರುವ ದ್ರಾಕ್ಷಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು” ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಕಲ್ಲಪ್ಪ ಪಾರಶೆಟ್ಟಿ, ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ಸಂಚಾಲಕ ಪ್ರತಾಪ ನಾಗರಗೋಜಿ, ಜಿಲ್ಲಾ ಸಂಚಾಲಕ ನಜೀರ ನಂದರಗಿ, ತಿಕೋಟಾ ಸಂಚಾಲಕರು ಶಾನುರ ನಂದರಗಿ, ಅಭಿಷೇಕ ಹೂಗಾರ, ಶಶಿಕಾಂತ ಬಿರಾದಾರ, ಖಾದರಸಾಬ ವಾಲಿಕಾರ, ಗುರುಲಿಂಗ ಕಾಳಿ, ಇಲಾಯೀ ವಾಲಿಕಾರ, ಆಕಾಶ ಜಾನವರ, ರಾಮು ಗೌರಗುಂಡ, ರಾಜಕುಮಾರ ಹಿರೇಕುರಬರ, ಸುಧಾಕರ ನಲವಡೆ, ರಿಯಾಜ್ ವಾಲಿಕಾರ, ಸೇರಿದಂತೆ ಅನೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X