ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಟಿಂಬರ್ ಲೇಔಟ್‌ನಲ್ಲಿ ನಡೆದಿದೆ.
ಡಿಸೆಂಬರ್ 5ರ ರಾತ್ರಿ 9.30ರ ಸುಮಾರಿಗೆ ಈ ಕೃತ್ಯ ನಡೆದಿದ್ದು, ಅರುಣ್ (24) ಕೊಲೆಯಾದ ದುರ್ದೈವಿ.
10 ಕ್ಕೂ ಹೆಚ್ಚು ದುಷ್ಕರ್ಮಿಗಳು ಅರುಣ್ ಅನ್ನು ಸುತ್ತುವರಿದು ಕೊಚ್ಚಿ ಕೊಲೆ ಮಾಡಿದ್ದಾರೆ. ವಿಷಯ ತಿಳಿದ ಬ್ಯಾಟರಾಯನಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ.
ಕೊಲೆಯಾದ ಅರುಣ್ ಓರ್ವ ಯುವತಿಯನ್ನು ಪ್ರೀತಿ ಮಾಡುತ್ತಿದ್ದನು. ಮದುವೆಯಾಗಲು ಮುಂದಿನ ತಿಂಗಳು ದಿನಾಂಕ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಗಣ್ಯರಿಂದ ನಮನ
ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೊಲೆಗೆ ಕಾರಣವೇನು? ಇದರ ಹಿಂದಿರುವವರು ಯಾರು? ಎಂಬುದು ತನಿಖೆಯ ಬಳಿಕ ಹೊರಬೀಳಲಿದೆ.