ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

Date:

Advertisements

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್’ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ”ಎಂದು ಹೆಸರಿಸಲಾಗಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ. ನೂತನ ಕಾರ್ಡ್’ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು” ಎಂದರು.

Advertisements

ಯೋಜನೆಯ ಪ್ರಮುಖಾಂಶ

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್’ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್’ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

ರಾಜ್ಯದಲ್ಲಿರುವ ಒಟ್ಟು5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ 66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು ಶೇ. 34 ನೀಡುತ್ತಿದೆ. ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.

ಎಪಿಎಲ್ ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಪಿಎಲ್ ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡು’ದಾರರು ಶೇ 70 ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಶೇ 30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು“ಆಯುಷ್ಮಾನ್ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ.

ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ.

ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ ಎಸ್‌ಇಸಿಸಿ 2011ರ ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್ ಹಾಗೂ 19 ಲಕ್ಷ ಎಪಿಎಲ್ ಕುಟುಂಬಗಳಿಗೆ ಶೇ.100 ಅನುದಾನ ಒದಗಿಸುತ್ತಿದೆ.

ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.

ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ಐಡಿ (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರಿಕ ಸೇವಾ “ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X