ಮುದ್ದೇಬಿಹಾಳ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ : ವರದಿ ಆಧರಿಸಿ ಕ್ರಮ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Date:

Advertisements

ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಬದ್ಧವಿದೆ. ಸಂಶೋಧನಾ ಕೇಂದ್ರ ಸ್ಥಾಪನೆಗೆ ಮೀಸಲಿರಿಸಿದ ಜಮೀನಿನ ಕುರಿತು ಸ್ಥಳ ಪರಿಶೀಲನೆ ಮಾಡಿದ ಅಧಿಕಾರಿಗಳ ಸಮಿತಿ, ಜಮೀನು ಕೃಷಿಗೆ ಯೋಗ್ಯವಿಲ್ಲ ಎಂದು ವರದಿ ನೀಡಿದೆ. ಮತ್ತೊಮ್ಮೆ ಈ ಕುರಿತು ಅಧಿಕಾರಿಗಳಿಂದ ವರದಿ ತರಿಸಿಕೊಂಡು, ಅದರ ಆಧಾರಲ್ಲಿ ಮುಂದಿನ ಕ್ರಮ ಕೈಗೊಳ್ಳಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಬುಧವಾರ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವರು ಪತ್ರ ಬರೆದು ಮುದ್ದೇಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ, 100 ಎಕರೆ ಕೃಷಿಗೆ ಯೋಗ್ಯ ಭೂಮಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಈ ಜಮೀನು ಖರೀದಿಗೆ ರೂ.10 ಕೋಟಿ ಅನುದಾನ ನೀಡುವಂತೆಯೂ ಕೋರಿದ್ದಾರೆ. ಜಮೀನು ಲಭ್ಯತೆ ಕುರಿತು ವರದಿ ನೀಡುವಂತೆ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಈ ಹಿಂದೆ ಪತ್ರ ಬರೆಯಲಾಗಿತ್ತು. ಯಾವುದೇ ಸೂಕ್ತ ಜಮೀನು ಲಭ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಈಗಾಗಲೇ ವಿಜಯಪುರದಲ್ಲಿ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ಅಲಮೇಲದಲ್ಲಿ ಕೃಷಿ ಸಂಶೋಧನಾ ಕೇಂದ್ರ ಹಾಗೂ ಇಂಡಿಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಕಾರ್ಯನಿರ್ವಹಿಸುತ್ತಿವೆ. ಈ ಕೇಂದ್ರಗಳು ಜಿಲ್ಲೆಯ ಹವಾಮಾನಕ್ಕೆ ತಕ್ಕಂತೆ ಕೃಷಿ ಸಂಶೋಧನೆ ಹಾಗೂ ವಿಸ್ತರಣೆಯಲ್ಲಿ ತೊಡಗಿಕೊಂಡಿವೆ ಎಂದು ಅವರು ಸ್ಪಷ್ಟನೆ ನೀಡಿದರು.

ಇದೇ ವೇಳೆ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಸ್ತುತ ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯ, ಸಂಶೋಧನ ಕೇಂದ್ರ ಹಾಗೂ ಕೃಷಿ ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಲವರ್ಧನೆಗೆ ತೀರ್ಮಾನಿಸಲಾಗಿದೆ ಎಂದರು.

ಕೃಷಿ ಇಲಾಖೆಯ ಖಾಲಿ ಹುದ್ದೆಗಳಿಗೆ ಎರಡು ಹಂತದಲ್ಲಿ ನೇಮಕಾತಿ

ಬೆಳಗಾವಿ ಸುವರ್ಣವಿಧಾನಸೌಧ ಡಿ.05: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಈ ಹುದ್ದೆಗಳಿಗೆ ಎರೆಡು ಹಂತದಲ್ಲಿ ನೇಮಕಾತಿಯ ಪ್ರಕ್ರಿಯೆ ನಡೆಯಲಿದೆ ಎಂದು ಕೃಷಿ ಸಚಿವ ಎನ್.ಚಲವರಾಯಸ್ವಾಮಿ ಹೇಳಿದರು.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಬೀಳಗಿ ಶಾಸಕ ಪಾಟೀಲ್.ಜೆ.ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿವ ವೇಳೆ ನಡೆದ ಚರ್ಚೆಯಲ್ಲಿ, ಅವರು ಈ ಮಾಹಿತಿಯನ್ನು ಸದನಕ್ಕೆ ನೀಡಿದರು.

ಕೃಷಿ ಇಲಾಖೆಯಲ್ಲಿ ಶೇ.60 ರಷ್ಟು ಹುದ್ದೆಗಳ ಕೊರತೆ ಇದೆ. ಇದರಿಂದಾಗಿ ಹೋಬಳಿ ಹಾಗೂ ಗ್ರಾಮಗಳಲ್ಲಿ ಅಧಿಕಾರಿಗಳು ತೆರಳಿ ಕ್ಷೇತ್ರ ಕಾರ್ಯನಿರ್ವಹಿಸುವಲ್ಲಿ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ನೇಮಕಾತಿ ಮಾಡುವ ಮೂಲಕ ಶೀಘ್ರವೇ ಬಗೆಹರಿಸಲಾಗುವುದು.

ಸರ್ಕಾರ ಕೃಷಿ, ನೀರಾವರಿ ಹಾಗೂ ರೈತರ ಜಮೀನ ರಸ್ತೆಗಳ ಬಗ್ಗೆ ಹೆಚ್ಚಿನ ಒತ್ತು ನೀಡಿದೆ. ಸದ್ಯ ಕೃಷಿ ವಿಶ್ವವಿದ್ಯಾಲಯ, ಸಂಶೋಧನಾ ಕೇಂದ್ರ ಹಾಗೂ ಇಲಾಖೆ ಅಧಿಕಾರಿಗಳು ರೈತರ ಹೊಲಗಳಿಗೆ ತೆರಳಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಅತಿಯಾದ ರಸಗೊಬ್ಬರಗಳ ಬಳಕೆಯಿಂದ ಕೃಷಿ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದೆ. ಇದನ್ನು ತಡೆಗಟ್ಟಲು ರೈತರಿಗೆ ಭೂ ಫಲವತ್ತೆ ಕುರಿತು ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತಿದೆ.

ಮಣ್ಣು ಪರೀಕ್ಷೆಯ ಮೂಲಕ ಸಮತೋಲನ ಪ್ರಮಾಣ ರಸಗೊಬ್ಬರಗಳ ಬಳಕೆಗೆ ಶಿಫಾರಸ್ಸು ಮಾಡಲಾಗುತ್ತಿದೆ. ಸಾವಯವ, ಜೈವಿಕ,ನ್ಯಾನೋ ಹಾಗೂ ನೈಸರ್ಗಿಕ ಗೊಬ್ಬರ, ಲಘುಫೋಷಕಾಂಶಗಳು ಮತ್ತು ಮಣ್ಣು ಸುಧಾರಕಗಳ ಬಳಕೆ ಬಗ್ಗೆ ರೈತರಿಗೆ ವೈಜ್ಞಾನಿಕವಾಗಿ ಸಲಹೆ ನೀಡಲಾಗುತ್ತಿದೆ. ಮಣ್ಣಿನ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನದಡಿ ಹಸಿರೆಲೆ ಗೊಬ್ಬರದ ಬೀಜಗಳನ್ನು ಶೇ.75ರ ಸಹಾಯಧನಲ್ಲಿ ರೈತÀ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ರೂ.3 ಕೋಟಿ ಒದಗಿಸಲಾಗಿದೆ ಎಂದರು.

ಆಹಾರ ಮತ್ತು ಪೌಷ್ಠಿಕಾಂಶಭದ್ರತೆ ಕಾರ್ಯಕ್ರಮದಡಿ ಬೀಜಗಳು, ಜಿಪ್ಸಂ, ಕೃಷಿ ಸುಣ್ಣ, ಲಘು ಪೋಷಕಾಂಶಗಳು, ಹಸಿರಲೆ, ಜೈವಿಕ ಹಾಗೂ ಸಾವಯವ ಗೊಬ್ಬರಗಳನ್ನು ಶೇ.50ರ ಸಹಾಯಧನದಲ್ಲಿ ವಿತರಿಸಲಾಗುತ್ತಿದೆ. ಸದರಿ ಯೋಜನೆಯಡಿ ರೂ.30 ಕೋಟಿ ವೆಚ್ಚದಲ್ಲಿ 7,43,850 ಹೆಕ್ಟೇರ್ ಪ್ರದೇಶಕ್ಕೆ ಪರಿಕರಗಳನ್ನು ಒದಗಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲವರಾಯಸ್ವಾಮಿ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X