ತೆಲಂಗಾಣ ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ನಮ್ಮ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ಜನರಿಗೆ ಧನ್ಯವಾದಗಳು. ಅವರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಹೈದರಾಬಾದ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದರು.

“ತೆಲಂಗಾಣ ರಾಜ್ಯದ ಜನರು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಗೌರವ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಾವು ಅವರಿಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ತಿಳಿಸಿದರು.

Advertisements

ಯತ್ನಾಳ್ ಅವರನ್ನು ಒಳ್ಳೆಯ ಆಸ್ಪತ್ರೆಗೆ ಸೇರಿಸೋಣ

ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ನಿನ್ನೆ ರಾತ್ರಿ ಮಾಧ್ಯಮಗಳು, “ಸಿಎಂ ಭಯೋತ್ಪಾದಕರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ” ಎಂಬ ಬಿಜೆಪಿ ಶಾಸಕ ಯತ್ನಾಳ್ ಅವರ ಆರೋಪದ ಬಗ್ಗೆ ಕೇಳಿದಾಗ “ಯತ್ನಾಳ್ ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಒಳ್ಳೆಯ ಆಸ್ಪತ್ರೆಗೆ ಸೇರಿಸೋಣ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದರು.

ಪಂಚರಾಜ್ಯ ಚುನಾವಣೆಯಲ್ಲಿ ನಿರೀಕ್ಷೆಗೆ ತಕ್ಕ ಫಲಿತಾಂಶ ಬಂದಿಲ್ಲ ಎಂದು ಕೇಳಿದಾಗ, “ಜನರ ತೀರ್ಪಿಗೆ ನಾವು ಗೌರವ ನೀಡುತ್ತೇವೆ” ಎಂದು ತಿಳಿಸಿದರು.

ನೀವು ಸದನದಲ್ಲಿ ಹಾಜರಾಗಿಲ್ಲ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಅವರು ಹುಡುಕಾಡಲಿ. ಕಾಳು, ಬಲೆ ಹಾಕಿಕೊಂಡು ಹುಡುಕಾಡಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X