ಬೇರೊಬ್ಬರ ಜತೆಗೆ ನಿಶ್ಚಿತಾರ್ಥವಾದ ಬಳಿಕ ಐದಾರು ವರ್ಷದ ಪ್ರೀತಿಯನ್ನು ಕಡೆಗಣಿಸುತ್ತಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.
ಡಿ.6ರ ರಾತ್ರಿ ಈ ಘಟನೆ ನಡೆದಿದೆ. ರಾಕೇಶ್ ಮೃತ ದುರ್ದೈವಿ. ಈತನು ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದವನು.
ರಾಕೇಶ್ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್, ಹೆಮ್ಮಿಗೆಪುರದಲ್ಲಿ ಯುವತಿಯೊಬ್ಬರು ಪರಿಚಯವಾಗಿದ್ದರು. ಕಳೆದ ಐದಾರು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ಮದುವೆ ವಿಚಾರವಾಗಿ ರಾಕೇಶ್ ತಂದೆ ಯುವತಿಯ ಮನೆಗೆ ಹೋಗಿ ಮಗಳನ್ನು ಮದುವೆ ಮಾಡಿ ಕೊಡುವಂತೆ ಕೇಳಿದ್ದಾರೆ.
ಇತ್ತೀಚೆಗೆ, ಯುವತಿ ಬೇರೊಬ್ಬ ಯುವಕನ ಜತೆಗೆ ಮದುವೆಗೆ ಒಪ್ಪಿಕೊಂಡಿದ್ದಳು. ನಿಶ್ಚಿತಾರ್ಥವೂ ಆಗಿತ್ತು. ಬಳಿಕ, ಯುವತಿ ರಾಕೇಶ್ನ ಜೊತೆಗೆ ಮಾತುಕತೆ ನಡೆಸುವುನ್ನು ಬಿಟ್ಟಿದ್ದಳು. ಪ್ರಿಯತಮೆಯ ಈ ವರ್ತನೆಯಿಂದ ಅನುಮಾನಗೊಂಡ ರಾಕೇಶ್, ಆಕೆಯನ್ನು ಪ್ರಶ್ನೆ ಮಾಡಲು ಯುವತಿಯ ಮನೆ ಬಳಿ ತೆರಳಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಗಲಾಟೆ ನಡುವೆ ಯುವತಿ ತನ್ನ ನಿರ್ಧಾರದ ಬಗ್ಗೆ ತಿಳಿಸಿದ್ದಾಳೆ. ಇದರಿಂದ ಮನನೊಂದ ರಾಕೇಶ್ ಯುವತಿಯ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳೆದ 11 ತಿಂಗಳಲ್ಲಿ 16 ಸಾವಿರ ಸೈಬರ್ ಪ್ರಕರಣ ದಾಖಲು
ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ.
ಸದ್ಯ ರಾಕೇಶ್ ಕುಟುಂಬಸ್ಥರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ.