ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.
“ಯಾವುದೇ ತರಗತಿಗಳಿಗೆ ಹಾಜರಾಗಲು ಹೋದರೂ ಶಿಕ್ಷಕರು ಇರುವುದಿಲ್ಲ. ಶಿಕ್ಷಕರ ಕೊರತೆ ಉಂಟಾಗಿರುವುದು ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ನೀಗಿಸುವ ಸಲುವಾಗಿ ಬದಲಿ ಉಪನ್ಯಾಸಕರನ್ನು ಕೂಡಲೇ ನೇಮಿಸಬೇಕು” ಎಂದು ಒತ್ತಾಯಿಸಿದರು.
“ಸಾಧ್ಯವಾದಷ್ಟು ಬೇಗ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಇನಾಂ ಭೂಹಗರಣ ವಿರೋಧಿಸಿ ಸುವರ್ಣಸೌಧ ಚಲೋ ಪಾದಯಾತ್ರೆ
ಈ ಸಂದರ್ಭದಲ್ಲಿ ಜಿಲ್ಲಾಅಧ್ಯಕ್ಷ ವಿಜಯ್ ಕುಮಾರ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರ ಅಧ್ಯಕ್ಷರುಗಳಾದ ಚರಣ್, ಗಿರೀಶ್, ರವಿ ರಂಗೇನಹಳ್ಳಿ, ಚಂದ್ರೋಜಿ, ಪ್ರದೀಪ್ ಹಾಗೂ ಪದಾಧಿಕಾರಿಗಳು ಸೇರಿದಂತೆ ಹಲವು ವಿದ್ಯಾರ್ಥಿಗಳು ಇದ್ದರು.