ನೀಡಿದ ಹೋಮ್‌ವರ್ಕ್ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಿಕ್ಷಕಿ ವಿದ್ಯಾರ್ಥಿಗೆ ಅಸೈನ್ಮೆಂಟ್ ಬರೆಯಲು ನೀಡಿದ್ದರು. ವಿದ್ಯಾರ್ಥಿ ಅಸೈನ್‌ಮೆಂಟ್ ಬರೆದಿಲ್ಲ ಎಂದು ಶಿಕ್ಷಕಿ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿ ಕೈಗೆ ರಾಡ್‌ನಿಂದ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯನ್ನು ಮುಚ್ಚಿಹಾಕಲು ಶಾಲಾ ಆಡಳಿತ ಮಂಡಳಿ ಪ್ರಯತ್ನಿಸಿತ್ತು ಎಂಬ ಆರೋಪ ಕೇಳಿಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ
“ಈ ಘಟನೆ ಬಗ್ಗೆ ನಮಗೆ ಡಿ.7 ರಂದು ದೂರು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಲಾಗಿದೆ. ಜತೆಗೆ ಶಾಲೆಗೆ ನೋಟಿಸ್ ನೀಡುತ್ತಿದ್ದೇವೆ. ಶಿಕ್ಷಕಿಯ ವಿಚಾರಣೆ ಮಾಡುತ್ತೇವೆ. ಈ ಬಗ್ಗೆ ಶಾಲೆಯಿಂದ ಮಾಹಿತಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.