ಎನ್‌ಇಪಿಗಿಂತ ಗುಣಾತ್ಮಕ ಶಿಕ್ಷಣ ಜಾರಿ ತರುವ ಪ್ರಯತ್ನ: ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

Date:

Advertisements

ರಾಷ್ಟ್ರೀಯ ಶಿಕ್ಷಣ ನೀತಿಯು ಸಾಧಿಸಬಹುದಾಗಿರುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಗುಣಾತ್ಮಕ ಶಿಕ್ಷಣ ಜಾರಿ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ.

ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ವಲ್ಲೇಪುರ್, ಎನ್ ರವಿಕುಮಾರ, ಡಾ.ವೈ.ಎ.ನಾರಾಯಣಸ್ವಾಮಿ, ಡಿ.ಎಸ್.ಅರುಣ್ ಹಾಗೂ ಇತರರು ನಿಯಮ 330 ರಡಿ ಸೂಚನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

“ಕೇಂದ್ರ ಸರ್ಕಾರವು ಜಾರಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ರಾಜ್ಯ ಸರ್ಕಾರವು ರದ್ದುಗೊಳಿಸಿರುವುದಿಲ್ಲ. ಹಾಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕಳೆದ ಎರಡು ಶೈಕ್ಷಣಿಕ ವರ್ಷಗಳಿಂದ ಈಗಾಗಲೇ ಅಳವಡಿಸಿಕೊಂಡಿದ್ದ ಪಠ್ಯಕ್ರಮಗಳನ್ನು ಮುಂದುವರೆಸಿದ್ದು, ಪ್ರಸ್ತುತ ವಿದ್ಯಾರ್ಥಿಗಳು ಈ ಪಠ್ಯಕ್ರಮಗಳನ್ನೇ ಅಭ್ಯಾಸ ಮಾಡುತ್ತಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಹಾಗೂ ಮುಂದಿನ ವ್ಯಾಸಂಗಕ್ಕೆ ಯಾವುದೇ ಅಡಚಣೆ ಆಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

Advertisements

“ಭಾರತ ದೇಶವು ಬಹು ಸಂಸ್ಕೃತಿ, ಬಹು ಭಾಷೆ ಹಾಗೂ ಬಹು ಆರ್ಥಿಕ-ಸಾಮಾಜಿಕ ಪರಿಸ್ಥಿತಿಯನ್ನು ಹೊಂದಿರುವ ದೇಶವಾಗಿದೆ. ಇತರ ರಾಜ್ಯಗಳಂತೆ ಕರ್ನಾಟಕ ರಾಜ್ಯವು ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ವಿಶೇಷವಾಗಿ, ಶೈಕ್ಷಣಿಕ ರಂಗದಲ್ಲಿ ಕರ್ನಾಟಕ ರಾಜ್ಯವು ದೇಶದ ಇತರೆ ಭಾಗಗಳಿಗೆ ಹೋಲಿಸಿದಲ್ಲಿ ತನ್ನದೇ ಗುಣಮಟ್ಟ ಮತ್ತು ಛಾಪನ್ನು ಹೊಂದಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವು ಗುಣಾತ್ಮಕ ಶಿಕ್ಷಣಕ್ಕೆ ಸಾರ್ವತ್ರಿಕ ನೆಲೆಗಟ್ಟಿನಲ್ಲಿ ಅವಕಾಶಗಳನ್ನು ನೀಡಲು ಹಾಗೂ ಆರ್ಥಿಕ ಪ್ರಗತಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆ, ವೈಜ್ಞಾನಿಕ ಮುನ್ನಡೆ, ರಾಜ್ಯ ಏಕತೆ ಹಾಗೂ ಸಾಂಸ್ಕೃತಿಕ ಸಂರಕ್ಷಣೆ, ಜಾಗತಿಕ ಮುಂದಾಳತ್ಯ ಈ ಗುರಿಗಳನ್ನು ಸಾಧಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಗುಣಾತ್ಮಕ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ” ಎಂದರು.

“ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳಿಗೆ ವಿರೋಧ ಇಲ್ಲದಂತೆ ರಾಜ್ಯದಲ್ಲಿ ಪ್ರಾದೇಶಿಕ ಸಮತೋಲನ ಕಾಪಾಡುವ ದೃಷ್ಟಿಯಿಂದ ರಾಜ್ಯ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ರಾಜ್ಯದಲ್ಲಿ ಶಿಕ್ಷಣ ನೀತಿಯನ್ನು ರೂಪಿಸಬೇಕಾಗುತ್ತದೆ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಶಾಲಾ ಮತ್ತು ಉನ್ನತ ಶಿಕ್ಷಣದಲ್ಲಿ ಪ್ರವೇಶಾತಿಯನ್ನು ಹೆಚ್ಚಿಸಲು ಗುಣಮಟ್ಟವನ್ನು ಉತ್ತಮಪಡಿಸಿ, ಸುಧಾರಿತ ಗುಣಮಟ್ಟದ ಶಿಕ್ಷಣದ ಲಭ್ಯತೆಯನ್ನು ಎಲ್ಲರಿಗೂ ನೀಡುವ ಮೂಲಕ ಶಿಕ್ಷಣವನ್ನು ವಿಸ್ತರಿಸಲು, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಅರಿವನ್ನು ಮೂಡಿಸಲು, ಕೌಶಲ್ಯಾಧಾರಿತ ಹಾಗೂ ವೃತ್ತಿ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಉದೋಗ್ಯಾರ್ಹತೆಯನ್ನು ಹೆಚ್ಚಿಸಲು ಮತ್ತು ನೈತಿಕ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ನಾಗರೀಕರನ್ನು ನಿರ್ಮಾಣ ಮಾಡಲು ಅನುವಾಗುವಂತೆ ಶಿಕ್ಷಣದ ಪ್ರಮುಖ ಗುರಿಗಳನ್ನು ಸಾಧಿಸಲು ಶಾಲಾ ಮತ್ತು ಉನ್ನತ ಶಿಕ್ಷಣವನ್ನು ಜಾಗರೂಕತೆಯಿಂದ ಪರಿಶೀಲಿಸಿ ಸೂಕ್ತ ನೀತಿಗಳನ್ನು ಶಿಫಾರಸ್ಸು ಮಾಡಲು ಶ್ರೇಷ್ಠ ಶಿಕ್ಷಣ ತಜ್ಞರ ಅಧ್ಯಕ್ಷತೆಯಲ್ಲಿ 15 ಸದಸ್ಯರ ಹಾಗೂ 8 ಸಲಹೆಗಾರರನ್ನೊಳಗೊಂಡ ಶಿಕ್ಷಣ ತಜ್ಞರ ರಾಜ್ಯ ಶಿಕ್ಷಣ ಆಯೋಗವನ್ನು 2023ರ ಅಕ್ಟೋಬರ್ 11ರಂದು ರಚಿಸಿ ಸರ್ಕಾರವು ಆದೇಶಿಸಿದೆ” ಎಂದು ಮಾಹಿತಿ ನೀಡಿದರು.

“ರಾಷ್ಟ್ರೀಯ ಶಿಕ್ಷಣ ನೀತಿಯು ಸಾಧಿಸಬಹುದಾಗಿರುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಗುಣಾತ್ಮಕ ಶಿಕ್ಷಣ ಜಾರಿ ತರಲು ರಾಜ್ಯ ಸರ್ಕಾರವು ಮುಂದಾಗಿದೆ. ಈ ಆಯೋಗವು ರಾಜ್ಯಕ್ಕೆ ಅವಶ್ಯಕವಿರುವ ಶಿಕ್ಷಣ ನೀತಿಯನ್ನು ರೂಪಿಸಲು ಸೂಕ್ತ ಶಿಫಾರಸ್ಸುಗಳನ್ನು ನೀಡುತ್ತದೆ. ಅವಶ್ಯವಿರುವ ಪಠ್ಯಕ್ರಮಗಳ ರೂಪುರೇಷೆಗಳನ್ನು ಸಲಹಾತ್ಮಕವಾಗಿ ನೀಡುವುದೇ ಹೊರತು ಪಠ್ಯ ಕ್ರಮಗಳನ್ನು ಸಿದ್ಧಪಡಿಸುವ ಸಮಿತಿಯಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದೇಶದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ -2020 ಸೇರಿದಂತೆ ಇಲ್ಲಿಯವರೆಗೂ ರಚನೆಗೊಂಡು ಅನುಷ್ಠಾನಗೊಂಡಿರುವ ಎಲ್ಲ ಶಿಕ್ಷಣ ನೀತಿ ಆಯೋಗಗಳ ವರದಿಗಳನ್ನು ಪರಿಗಣಿಸಿ ರಾಜ್ಯದ ಸ್ಥಳೀಯ, ಭೌಗೋಳಿಕ, ಅಂತರಾಷ್ಟ್ರೀಯ, ಸಾಮಾಜಿಕ, ಆರ್ಥಿಕ, ಗ್ರಾಮೀಣ ಅವಶ್ಯಕತೆಗಳು ಅಂಶಗಳನ್ನು ಪರಿಗಣಿಸಿ ರಾಜ್ಯಕ್ಕೆ ಅವಶ್ಯಕವಿರುವ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ಆಯೋಗವು ಶಿಫಾರಸ್ಸು ಮಾಡಲು ಕೋರಿದೆ” ಎಂದು ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

“ವರದಿಯನ್ನು ಸಿದ್ಧಪಡಿಸುವ ಮುಂಚಿತವಾಗಿ ಶಿಕ್ಷಣ ರಂಗದ ಎಲ್ಲಾ ಹಿತಾಸಕ್ತಿದಾರರೊಂದಿಗೆ ವ್ಯಾಪಕವಾಗಿ ಚರ್ಚಿಸಿ ರಾಜ್ಯದ ಎಲ್ಲ ವಿಭಾಗಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಶಿಕ್ಷಣ ನೀತಿಗಳನ್ನೂ ಸಹ ಅಧ್ಯಯನ ಮಾಡಲು ಉದ್ದೇಶಿಸಿದೆ. ಆನಂತರವಷ್ಟೆ ರಾಜ್ಯಕ್ಕೆ ಅಗತ್ಯವಾದ ಶಿಕ್ಷಣ ನೀತಿ ರೂಪುಗೊಳ್ಳಲಿದೆ” ಎಂದು ಸಚಿವರು ತಮ್ಮ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X