ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿಕಾರಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಶಾಲೆಯ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತು ಮಾಡಿ, ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿತ್ತು. ವಿದ್ಯಾರ್ಥಿನಿಯರು ಮುಖ್ಯಶಿಕ್ಷಕರಿಗೆ ದೂರು ನೀಡಿದರೂ, ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಹೇಳಾಗಿತ್ತು.
ಬಳಿಕ, ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿತ್ತ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗಿದ್ದು, ಕಿರುಕುಳ ನೀಡಿದ ಆರೋಪಿ ಶಿಕ್ಷಕ ಶಾಂತಕುಮಾರ್ ಮತ್ತು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದೆ ಕರ್ತವ್ಯಲೋಪ ಎಸಗಿದ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.