ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಮಾನ್ಯ ಮಾಡಿದ ಸುಪ್ರೀಂ

Date:

Advertisements

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ರಾಜ್ಯದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ಪ್ರಕಟಿಸಿದ್ದು, ”ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ” ಎಂದು ಪೀಠ ತಿಳಿಸಿದೆ.

Advertisements

ಈ ಪೀಠದಲ್ಲಿ ಸಿಜೆಐ ಹೊರತಾಗಿ, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಇದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಸತತ 16 ದಿನಗಳ ಕಾಲ ಸರ್ವಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

370 ವಿಧಿ

​ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆಗಳನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. “ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಸಭೆಯಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆಗಳು ನಡೆಯುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಜ್ಯತ್ವವನ್ನು ಮರುಸ್ಥಾಪಿಸಬೇಕು ಎಂದು ನಾವು ನಿರ್ದೇಶಿಸುತ್ತೇವೆ” ಎಂದು ಸಿಜೆಐ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.

ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, 2019ರ ಆಗಸ್ಟ್ 5ರಂದು ರದ್ದುಪಡಿಸಿತ್ತು. ಹಾಗೆಯೇ, ರಾಜ್ಯವನ್ನು ‘ಜಮ್ಮು ಮತ್ತು ಕಾಶ್ಮೀರ’ ಹಾಗೂ ‘ಲಡಾಖ್’ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X