ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಗುಂಪೊಂದು ತಡೆದು ಹಲ್ಲೆ ಮಾಡಿ ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಉಪ್ಪಿನಂಗಡಿ ಬಳಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದೆ. ಘಟನೆಯು ವಾರಕ್ಕೂ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಪಾಠಿಗಳು ಜೊತೆಗೆ ಹೋಗುತ್ತಿರುವುದನ್ನು ಗಮನಿಸಿದ ಗುಂಪೊಂದು ಅವರನ್ನು ತಡೆದು ಗೂಂಡಾಗಿರಿ ಮಾಡಿದೆ. ವಿದ್ಯಾರ್ಥಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳ ಪತ್ತೆಗೆ ಹುಡುಕಾಟ ನಡೆಯುತ್ತಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದವರ ವಿರುದ್ಧವೂ ಪೋಕ್ಸೋ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.