ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ: ಮಧು ಬಂಗಾರಪ್ಪ

Date:

Advertisements

ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಸರಬರಾಜು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧುಬಂಗಾರಪ್ಪ ಹೇಳಿದರು.

ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎನ್ ರವಿಕುಮಾರ ಅವರ ಪ್ರಶ್ನೆಗೆ ಉತ್ತರಿಸಿ, “2023-24ನೇ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕಕ್ಕೆ ಸರಾಸರಿ 397 ರೂ. ವೆಚ್ಚ ಮಾಡಲಾಗಿದೆ. ಶೂ ಮತ್ತು ಸಾಕ್ಸ್ ಗಳಿಗೆ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 295 ರೂ., ಹಾಗೂ 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ.ಗಳನ್ನು ವೆಚ್ಚ ಮಾಡಲಾಗಿದೆ” ಎಂದರು.

“ಅದೇ ರೀತಿ 1 ರಿಂದ 10ನೇ ತರಗತಿವರೆಗೆ ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳಿಗೆ ತಲಾವಾರು ವೆಚ್ಚ ಮಾಡಲಾಗಿದೆ. 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ ಪಠ್ಯಪುಸ್ತಕಗಳನ್ನು ಹಾಗೂ 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಾಗಿದೆ” ಎಂದು ಹೇಳಿದರು.

Advertisements

“2023-24ನೇ ಸಾಲಿನಲ್ಲಿ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ 55,43,828 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 4,47,17,051 ಪಠ್ಯಪುಸ್ತಕಗಳನ್ನು ಜನವರಿ 2023 ರಿಂದ ಮಾರ್ಚ 2023ರವರೆಗೆ ಸರಬರಾಜು ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾರಂಭದ ದಿನದಂದು ವಿತರಿಸಲಾಗಿದೆ” ಎಂದರು.

“45,45,749 ವಿದ್ಯಾರ್ಥಿಗಳಿಗೆ ತಲಾ ಎರಡು ಜೊತೆ ಸಮವಸ್ತ್ರಗಳನ್ನು ಒದಗಿಸಲಾಗಿದ್ದು ಮೊದಲ ಜೊತೆ ಸಮವಸ್ತ್ರಗಳನ್ನು ಮಾರ್ಚ್ 2023 ರಿಂದ ಜೂನ್ 2023ರವರೆಗೆ ಹಾಗೂ ಎರಡನೇ ಜೊತೆ ಸಮವಸ್ತ್ರಗಳನ್ನು ಜೂನ್ 2023ರಿಂದ ಸೆಪ್ಟೆಂಬರ್ 2023ರವರೆಗೆ ವಿತರಣೆ ಮಾಡಲಾಗಿದೆ. ಶೂ ಮತ್ತು ಸಾಕ್ಸ್ ಖರೀದಿ ಮಾಡಲು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ಜೂನ್ 2023ರಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X