ಹಲವು ದಿನಗಳ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಹೈಕಮಾಂಡ್ ಮಧ್ಯಪ್ರದೇಶದ ಮುಖ್ಯಮಂತ್ರಿ ಯಾರು ಎನ್ನುವ ವಿಚಾರದಲ್ಲಿ ಅಂತಿಮ ನಿರ್ಣಯ ಕೈಗೊಂಡಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ ಯಾದವ್ ಆಯ್ಕೆಯಾಗಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಹಿರಿಯರಿದ್ದ ಸ್ಪರ್ಧೆಯಲ್ಲಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಕೇವಲ ಮೂರು ಬಾರಿ ಶಾಸಕರಾಗಿರುವ ಮೋಹನ ಯಾದವ್‌ಗೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಿದೆ. ಅವರು ಉಜ್ಜೈನ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಮೋಹನ ಯಾದವ್ ಕಾಲೇಜು ದಿನಗಳಿಂದಲೂ ಎಬಿವಿಪಿಯಲ್ಲಿ ತೊಡಗಿಕೊಂಡಿದ್ದವರು. ಅವರು 2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಮಧ್ಯಪ್ರದೇಶದಲ್ಲಿ 2020ರಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ ಮೋಹನ ಯಾದವ್ ಅದರಲ್ಲಿ ಉನ್ನತ ಶಿಕ್ಷಣ ಖಾತೆಯ ಸಚಿವರಾಗಿದ್ದರು.