ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಡಿ.11ರಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು, ಶಿಕ್ಷಣ ವಿಭಾಗ, ವ್ಯೆದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ನರ್ಸಿಂಗ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಚುನಾವಣಾ ಸಾಕ್ಷರತಾ ಸಂಘ ಇಎಲ್‍ಸಿ, ಸ್ವೀಪ್ ಹಾಗೂ ಎಸ್‍ಎಸ್‍ಆರ್ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಟಿ.ಕೆ. ಸ್ವರೂಪ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ, ವಿಎಚ್‍ಎ ಮೊಬೈಲ್ ಆ್ಯಪ್ ಹಾಗೂ ಇಎಲ್‍ಸಿಗಳ ಮುಖಾಂತರ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಕೈಗೊಳ್ಳುವ ಕಾರ್ಯ ಚಟುವಟಿಕೆ ಕುರಿತು ವಿದ್ಯಾರ್ಥಿಗಳಿಗೆ ತಿಳವಳಿಕೆ ನೀಡಿದರು.
ಶಿಬಿರಾರ್ತಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಾಗಾರದಲ್ಲಿ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ಎಮ್.ಶೇಖ್, ವಿಜಯಕುಮಾರ ಮಾನೆ, ವಾಯ್.ಎಚ್. ಭಜಂತ್ರಿ ಹಾಗೂ ಭರತ ಚಂದನಕುಮಾರವರು ಭಾಗವಹಿಸಿದ್ದರು.