ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಒಸಿ, ಮಟ್ಕಾ ದಂಧೆ ಹೆಚ್ಚಿರುವ ಬಗ್ಗೆ ಎಸ್.ಪಿ. ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡದೇ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಜಿರೋ ಟಾಲರೆನ್ಸ್ನಲ್ಲಿ ಇಂತಹ ಸಂಘಟಿತ ಅಪರಾಧಗಳನ್ನು ಭೇದಿಸಲಾಗುವುದು. ಅಲ್ಲದೆ, ಈ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೇ ನೀಡಿ ಎಂದಿದ್ದಾರೆ.
ಇನ್ನೂ ನಿನ್ನೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ, ಗೋಕುಲ್ ಕೃಷ್ಣ ನೀಡಿದ ಹೇಳಿಕೆ ಆಧರಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದ್ದು, ಈ ಸಂಬಂಧ ತನಿಖೆ ನಡೆಸಲಾಗುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿವಮೊಗ್ಗದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ. ಬಿಜೆಪಿ ಕಾರ್ಯಕರ್ತನ ಕಾರು ಒಡೆದ ಪ್ರಕರಣದಲ್ಲಿ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಈ ಘಟನೆ ಕಾರಣ ತಿಳಿದುಬಂದಿಲ್ಲ. ಕೇಸ್ ವಿಚಾರಣಾ ಹಂತದಲ್ಲಿದೆ. ತನಿಖೆ ಬಳಿಕ ಮಾಹಿತಿ ನೀಡಲಾಗುವುದು ಎಂದರು.