2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಮೂಲದ ಲಿಯೋನಾರ್ಡ್ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.
ವೀಸಾ ಮೂಲಕ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ಲಿಯೋನಾರ್ಡ್ ಹೊಸ ವರ್ಷಕ್ಕೆಂದು ಅಪಾರ ಪ್ರಮಾಣದ ಡ್ರಗ್ಸ್ ತಂದು ಶೇಖರಣೆ ಮಾಡಿ ಇಟ್ಟಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಡಿ.31 ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಈ ವೇಳೆ, ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡಲು ಆರೋಪಿ ಸಜ್ಜಾಗಿದ್ದನು. ಬಂಧಿತ ಆರೋಪಿ ಪೆಡ್ಲರ್ ಆಗಿದ್ದಾನೆ. ಈತ ತನ್ನದೇ ಒಂದು ಗ್ಯಾಂಗ್ ಕಟ್ಟಿಕೊಂಡು ಬೆಡ್ಶೀಟ್ ಕವರ್, ಸೋಪ್ ಬಾಕ್ಸ್ ಹಾಗೂ ಚಾಕೊಲೇಟ್ ಬಾಕ್ಸ್ನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದನು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿತ: ದೊಡ್ಡ ಗುಂಡಿ ನಿರ್ಮಾಣ
ಈತನಿಂದ ಸಿಸಿಬಿ ಪೊಲೀಸರು 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೇನ್, ಮೂರು ತೂಕದ ಯಂತ್ರ, ಮೊಬೈಲ್ ಜಪ್ತಿ ಮಾಡಲಾಗಿದೆ.
ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.