ಚಿಕ್ಕಮಗಳೂರು | ಅಕ್ರಮ ಭೂ ಮಂಜೂರಾತಿ ಪ್ರಕರಣ; ಸ್ವಯಂ ಪ್ರೇರಿತ ದೂರು ದಾಖಲು

Date:

Advertisements

ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅಕ್ರಮ ಭೂ ಮಂಜೂರಾತಿ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಅಕ್ರಮದ ಸಂಬಂಧ ಭೂ ಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಮೂಡಿಗೆರೆ ಮತ್ತು ಕಡೂರು ತಾಲೂಕಿನಲ್ಲಿ ನಡೆದಿದ್ದ ಅಕ್ರಮ ಭೂ ಮಂಜೂರಾತಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅದಕ್ಕಾಗಿ ಸರ್ಕಾರ ವಿಶೇಷ ತಂಡ ರಚನೆ ಮಾಡಿ, ತನಿಖೆಗೆ ಸೂಚಿಸಿತ್ತು.

ತನಿಖಾಧಿಕಾರಿಗಳು ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಮಾಡಿ ಮಂಜೂರು ಮಾಡಿದ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದ್ದರು. ಅಕ್ರಮದ ಜಾಡು ಹಿಡಿದು ಹೊರಟ ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯರು ಸರ್ಕಾರದ ಕಣ್ಣಿಗೆ ಮಣ್ಣೆರಚಿ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದು ಕಂಡುಬಂದಿದೆ.

Advertisements

ಎಕರೆಗಟ್ಟಲೇ ಭೂಮಿ ಒತ್ತುವರಿ: ಯಾವಾಗ ಪ್ರಕರಣ ಹೊರಬಂದಿತೋ ಸರ್ಕಾರ 15 ಮಂದಿ ತಹಶೀಲ್ದಾರ್‌ಗಳ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ, ತನಿಖೆಗೆ ಆದೇಶಿಸಿತ್ತು. ಅಧಿಕಾರಿಗಳು ತನಿಖೆ ನಡೆಸಿದ 245 ಕಡತಗಳಿಗೆ ಸಂಬಂಧಿಸಿದಂತೆ 750 ಎಕರೆ ಜಮೀನು ಮಂಜೂರಾತಿ ರದ್ದು ಮಾಡಿದ್ದಾರೆ.

ಇನ್ನಷ್ಟು ಕಡತಗಳ ಪರಿಶೀಲನೆ ಬಾಕಿ ಇದ್ದು, ಮತ್ತಷ್ಟು ಭೂ ಮಂಜೂರಾತಿ ರದ್ದಾಗುವ ಆತಂಕ ಎದುರಾಗಿದೆ. 15 ಮಂದಿ ತಹಶೀಲ್ದಾರ್‌ಗಳ ತಂಡ ಸುದೀರ್ಘ ತನಿಖೆ ನಡೆಸಿದ ಬಳಿಕ ರಾಜ್ಯ ಸರ್ಕಾರದ ಮುಂದೆ ಹಿರಿಯ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾಗೆ 10,500 ಪುಟಗಳ ವರದಿ ಸಲ್ಲಿಸಿದ್ದಾರೆ. ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಈ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಕೂಡ ಪ್ರಕರಣದ ವಿಚಾರಣೆಯನ್ನು ಕೈಗೊಂಡಿದೆ.

ಈ ವೇಳೆ ನಮೂನೆ 50, 53, 57ರ ಅಡಿಯಲ್ಲಿ ಅರ್ಜಿ ಸಲ್ಲಿಸದೆ ಇದ್ದರೂ ಸರ್ಕಾರಿ ಜಾಗ ಹೇಗೆ ಮಂಜೂರಾಯಿತು? ಎಂಬುದು ಸ್ಥಳೀಯರು ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಭೂಮಿ ದೋಚಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಹಶೀಲ್ದಾರ್ ಖರೀದಿ ಮಾಡಿದ್ದ ಭೂಮಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಅಕ್ರಮಿಸಿರುವ ಪ್ರಕರಣವೂ ಬಯಲಾಗಿದೆ.

ಭೂ ಅಕ್ರಮದ ತನಿಖೆ ಇನ್ನಷ್ಟು ಚುರುಕುಗೊಂಡರೆ ಮತ್ತಷ್ಟು ಅಕ್ರಮಗಳು ಬಯಲಾಗುತ್ತವೆಂದು ಶಂಕೆ ವ್ಯಕ್ತಪಡಿಸಿದ್ದು, ಅಧಿಕಾರಿಗಳೇ ಸ್ವತಃ ಈ ಪರಿಯ ಒತ್ತುವರಿ ಮಾಡಿರುವುದನ್ನು ಕಂಡು 2019 ರಿಂದ 2021ರವರೆಗೆ ನಡೆದಿರುವ ಕಡತಗಳ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ನಕಲಿ ದಾಖಲೆ ಮಾಡಿ ಅರಣ್ಯ ಭೂಮಿಯನ್ನು ವಿದೇಶಿಯರಿಗೂ ಕೂಡ ಮಂಜೂರು ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಧಿಕಾರಿಗಳು ನಡೆಸಿರುವ ಅಕ್ರಮ ಭೂಮಂಜೂರಾತಿ ಪ್ರಕರಣವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ನವೆಂಬರ್‌ನಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಚಿಕ್ಕಮಗಳೂರು ಪ್ರೆಸ್‍ಕ್ಲಬ್‍ವತಿಯಿಂದ ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭೂ ಅಕ್ರಮಗಳ ಬಗ್ಗೆ ಮಾತನಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನ್ಯಾ. ಎ ಜೆ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಡಿಎಸ್ಎಸ್ ಆಗ್ರಹ

“ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ತಪ್ಪುಮಾಡಿರುವ ಅಧಿಕಾರಿ ವಿರುದ್ಧ ಕಂದಾಯ ಕಾಯ್ದೆ, ಕ್ರಿಮಿನಲ್‍ ಕಾಯ್ದೆ ದಾಖಲಾಗುವುದರೊಂದಿಗೆ ಕಾನೂನು ಬಾಹಿರವಾಗಿ ಮಂಜೂರು ಮಾಡಿದ್ದ ಭೂಮಿಯನ್ನು ರದ್ದುಗೊಳಿಸಿ ಕಂದಾಯ ಇಲಾಖೆಗೆ ವಾಪಸ್ ಪಡೆದುಕೊಳ್ಳಲಾಗುವುದು” ಎಂದು ಹೇಳಿದ್ದರು.

“ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಭೂಮಂಜೂರಾತಿಗೆ ಸಂಬಂಧಿಸಿದಂತೆ ತಪ್ಪುಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ ಮೂರು ರೀತಿಯ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X