ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೊಡಗು ಜಿಲ್ಲೆಯಲ್ಲಿ 2020ರಿಂದ ಇಲ್ಲಿಯವರೆಗೆ ಕಾಡಾನೆ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ 2020ರಿಂದ ಈವರೆಗೆ 14, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 5 ಹಾಗೂ ಕಳೆದ ಎರಡು ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಅರಣ್ಯದ ಅಂಚಿನಲ್ಲಿ 300 ಕಿಮೀ ಉದ್ದದಷ್ಟು ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಇನ್ನೂ 330 ಕಿಮೀ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲು ಯೋಜನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮಾನವ-ಆನೆ ಸಂಘರ್ಷ ವರದಿ ಮಾಡುವ ಪ್ರದೇಶಗಳಲ್ಲಿ ಸರ್ಕಾರವು ಜಿಲ್ಲಾ ಆನೆ ಕಾರ್ಯಪಡೆಯನ್ನು ನೇಮಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.