ಗೃಹ ರಕ್ಷಕರ ಕರ್ತವ್ಯ ಭತ್ಯೆ ಪರಿಷ್ಕರಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

Date:

Advertisements
  • 2025ರ ವೇಳೆಗೆ ರಾಜ್ಯದ ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ 
  • ಆಯವ್ಯಯದಲ್ಲಿ ಹೊಸ ಅಗ್ನಿಶಾಮಕ ಠಾಣೆಗೆ ಪ್ರಸ್ತಾವನೆ: ಪರಮೇಶ್ವರ್

ಗೃಹ ರಕ್ಷಕರಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕಿ ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

“21,327 ಪುರಷ ಹಾಗೂ 4555 ಮಹಿಳೆ ಸೇರಿ ಒಟ್ಟು 25,882 ಗೃಹರಕ್ಷರು ರಾಜ್ಯದಲ್ಲಿ ಕಾರ್ಯ ನಿರ್ವಿಹಿಸುತ್ತಿದ್ದಾರೆ. ಸರ್ಕಾರ ಆದೇಶದಂತೆ ಪೊಲೀಸ್ ಇಲಾಖೆಯ ಬಂದೋಬಸ್ತ್, ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಠಾಣೆ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ರೂ.750, ಬೇರೆ ಇಲಾಖೆಗಳಲ್ಲಿ ರೂ.600 ಹಾಗೂ ಪಹರೆ ಕೆಲಸಕ್ಕೆ ಬೆಂಗಳೂರು ನಗರದಲ್ಲಿ ರೂ.455 ಹಾಗೂ ಇತರೆ ಸ್ಥಳದಲ್ಲಿ ರೂ.380 ಭತ್ಯೆ ನೀಡಲಾಗುತ್ತಿದೆ. ಈ ವ್ಯತ್ಯಾಸವನ್ನು ಸರಿಪಡಿಸಿ ರೂ.750 ದಿನಭತ್ಯೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತಿಸಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

Advertisements

“ಗೃಹರಕ್ಷಕರಲ್ಲಿ ಯಾವುದೇ ತಾರತಮ್ಯ ಇಲ್ಲದೆ ಕರ್ತವ್ಯಕ್ಕೆ ನಿಯೋಜಿಸಬೇಕು. ಗೃಹರಕ್ಷಕರಿಗೆ ಆರೋಗ್ಯ ಭದ್ರತೆ, ಪ್ರಯಾಣ ಭತ್ಯೆಗಳನ್ನು ನೀಡಬೇಕು” ಎಂದು ಶಾಸಕಿ ಜೊಲ್ಲೆ ಶಶಿಕಲಾ ಒತ್ತಾಯಿಸಿದರು.

ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ

2025ರ ವೇಳೆಗೆ ರಾಜ್ಯದ ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಸಭೆಯ ಪ್ರಶೋತ್ನರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿ, “ಈ ಹಿಂದೆ ಗೃಹ ಸಚಿವನಾಗಿದ್ದ ವೇಳೆ 2020ರ ವೇಳೆಗೆ ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು ಯೋಜನೆ ರೂಪಿಸಿದ್ದೆ. ನಂತರ ಬಂದ ಸರ್ಕಾರವು ಯೋಜನೆಯನ್ನು ಮುಂದುವರಿಸಿದೆ. ಗ್ರಾಮೀಣ ಹಾಗೂ ಅವಶ್ಯಕತೆ ಇರುವ ಕಡೆ ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಈಗಾಗಲೇ ಶೇ.40 ರಷ್ಟು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ” ಎಂದರು.

“ಹೊನ್ನಾಳಿ ತಾಲ್ಲೂಕು ನ್ಯಾಮತಿಯಲ್ಲಿ 12 ಹೊಸ ವಸತಿ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪೊಲೀಸ್ ಠಾಣೆಗೆ 2.26 ಎಕರೆ ಜಮೀನು ನೀಡಿದ್ದ ದಿವಂಗತ ಹೆಚ್.ಬಸವರಾಜಪ್ಪನವರ ಪತ್ನಿ ಹಾಗೂ ಮಕ್ಕಳು ರೂ.45 ಲಕ್ಷಕ್ಕೂ ಹೆಚ್ಚಿನ ಪರಿಹಾರ ಕೋರಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈಗಾಗಲೇ ಅವರಿಗೆ ರೂ.53.92 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ನ್ಯಾಯಾಲಯದ ಆದೇಶ ಬಂದ ಕೂಡಲೇ ವಸತಿ ಗೃಹಗಳ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ” ಎಂದು ಪರಮೇಶ್ವರ್ ಶಾಸಕ ಶಾಂತನಗೌಡ ಡಿ.ಜಿ. ಚುಕ್ಕೆ ಗುರುತಿನ ಪ್ರಶ್ನೆ ಉತ್ತರಿಸಿದರು.

ಆಯವ್ಯಯದಲ್ಲಿ ಹೊಸ ಅಗ್ನಿಶಾಮಕ ಠಾಣೆಗೆ ಪ್ರಸ್ತಾವನೆ

“ರಾಜ್ಯದ ಹಲವು ತಾಲ್ಲೂಕು ಕೇಂದ್ರಗಳಲ್ಲಿ ಹೊಸ ಅಗ್ನಿಶಾಮಕ ಠಾಣೆ ನಿರ್ಮಿಸಲು ಶಾಸಕರಿಂದ ಕಡೆಯಿಂದ ಮನವಿಗಳು ಬಂದಿವೆ. ಈ ಮನವಿಗಳನ್ನು ಪರಿಗಣಿಸಿ ಮುಂದಿನ ಆಯವ್ಯಯದಲ್ಲಿ ಹೊಸ ಅಗ್ನಿಶಾಮಕ ಠಾಣೆ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ” ಹೇಳಿದರು.

ಮಹಿಳೆ ವಿವಸ್ತ್ರ ಪ್ರಕರಣ; ಪ್ರೇಮಿಗಳಿಗೆ ರಕ್ಷಣೆ

ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಪ್ರೀತಿಸಿ ಗ್ರಾಮ ಬಿಟ್ಟು ಹೋದ ಪ್ರೇಮಿಗಳನ್ನು ಹುಡುಕಿ ಸರ್ಕಾರದಿಂದ ಸೂಕ್ತ ರಕ್ಷಣೆ ಕಲ್ಪಿಸುವುದಾಗಿ ಪರಮೇಶ್ವರ್ ತಿಳಿಸಿದರು.

ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಪ್ರಕರಣದ ಕುರಿತು ಜರುಗಿದ ಚರ್ಚೆಯಲ್ಲಿ ಅವರು ಮಾತನಾಡಿ, “ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಇದಾಗಿದೆ. ಗ್ರಾಮದ ಅಶೋಕ್ ಗಡ್ಕರಿ ಹಾಗೂ ಪ್ರಿಯಾಂಕ ಪರಸ್ಪರ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಹುಡುಗಿಯ ಮನೆಯವರು ವಿರೋಧಿಸಿದ್ದರಿಂದ ಪ್ರೇಮಿಗಳು ಗ್ರಾಮ ಬಿಟ್ಟು ಹೋಗಿದ್ದಾರೆ. ಈ ವಿಚಾರ ತಿಳಿದ ಹುಡುಗಿಯ ಸಂಬಂಧಿಕರು, ಹುಡುಗನ ಮನೆಗೆ ಆಗಮಿಸಿ, ತಾಯಿ ಹಾಗೂ ವಯಸ್ಸಾದ ಅಜ್ಜಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ 55 ವರ್ಷದ ಹುಡುಗನ ತಾಯಿಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ” ಎಂದರು.

“ಘಟನೆ ಬಗ್ಗೆ ತಿಳಿದ ತಕ್ಷಣ ಪೊಲೀಸರು ಗ್ರಾಮಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿ, ಆಸ್ಪತ್ರೆ ದಾಖಲಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಭೇಟಿ ಮಾಡಿ ಧೈರ್ಯ ಹೇಳಿದ್ದೇನೆ. ಗ್ರಾಮಕ್ಕೂ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ. ಘಟನೆಯ ಬಗ್ಗೆ ತಿಳಿದು ಪ್ರೇಮಿಗಳು ಆತಂಕಕ್ಕೆ ಒಳಗಾಗಿ, ಅನಾಹುತ ಮಾಡಿಕೊಳ್ಳುವ ಮುನ್ನವೇ ಅವರನ್ನು ಪತ್ತೆ ಹಚ್ಚಿ ರಕ್ಷಣೆ ನೀಡುತ್ತೇವೆ” ಎಂದರು.

ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು

“ಸರ್ಕಾರ ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆರೋಗ್ಯ, ಆಹಾರ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರವೇ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸುತ್ತೇವೆ” ಪರಮೇಶ್ವರ್ ಹೇಳಿದರು.

ವಿಧಾನಸಭೆಯಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ ಅವರ ಚುಕ್ಕೆ ಪ್ರಶ್ನೆಗೆ ಅವರು ಉತ್ತರಿಸಿ, “ಹುಕ್ಕಾ ಬಾರ್ ಸ್ಥಾಪನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಯಾವುದೇ ರೀತಿಯ ವ್ಯಾಪಾರ ಪರವಾನಿಗೆ ನೀಡುವುದಿಲ್ಲ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ದಿಂದ ಪರವಾನಿ ಪಡೆದು ವ್ಯಾಪಾರಿಗಳು ಹುಕ್ಕಾ ಬಾರ್ ಗಳನ್ನು ನಡೆಸುತ್ತಿದ್ದಾರೆ. ನ್ಯಾಯಾಲಯವು ಸಹ ಹುಕ್ಕಾ ಸೇದುವವರಿಗೆ ಪ್ರತ್ಯೇಕ ಸ್ಥಳ ನಿಗದಿ ಪಡಿಸಬೇಕು ಎಂದು ಹೇಳಿದೆ. ನಿಯಂತ್ರಣದ ಬಗ್ಗೆ ಹೇಳಿಲ್ಲ. ಆದರೂ ಯುವ ಜನಾಂಗದ ಸ್ವಾಥ್ಯದ ದೃಷ್ಟಿಯಿಂದ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X